×
Ad

ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷೆ ಪಿ‌.ಟಿ. ಉಷಾರ ಪತಿ ವಿ.ಶ್ರೀನಿವಾಸನ್ ನಿಧನ

Update: 2026-01-30 12:49 IST

ವಿ.ಶ್ರೀನಿವಾಸನ್ (Photo: PTI)

ಹೊಸದಿಲ್ಲಿ: ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷೆ ಪಿ.ಟಿ.ಉಷಾರ ಪತಿ ವಿ.ಶ್ರೀನಿವಾಸನ್ ಶುಕ್ರವಾರ ನಿಧನರಾಗಿದ್ದಾರೆ. ಅವರು ಕೋಝಿಕ್ಕೋಡ್‌ನ ತಿಕ್ಕೋಟಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರಿಗೆ 67 ವರ್ಷ ವಯಸ್ಸಾಗಿತ್ತು.

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಶ್ರೀನಿವಾಸನ್, ನಿವೃತ್ತರಾದ ಬಳಿಕ ಉಷಾ ಸ್ಕೂಲ್ ಆಫ್ ಅಥ್ಲೆಟಿಕ್ಸ್‌ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಈ ಸಂಸ್ಥೆ ಟಿಂಕು ಲೂಕು ಹಾಗೂ ಜಿಸ್ನಾ ಮ್ಯಾಥ್ಯೂ ಸೇರಿದಂತೆ ಹಲವಾರು ಅಂತಾರಾಷ್ಟ್ರೀಯ ಅಥ್ಲೀಟ್‌ಗಳನ್ನು ತಯಾರು ಮಾಡಿದೆ.

ಕ್ರೀಡೆಯ ಬಗ್ಗೆ ತುಂಬಾ ಆಸಕ್ತಿ ಹೊಂದಿದ್ದ ಶ್ರೀನಿವಾಸನ್, 1998ರ ಪಿ.ಟಿ.ಉಷಾ ಏಶ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಮೂಲಕ ಸ್ಪರ್ಧಾತ್ಮಕ ಕ್ರೀಡಾಕೂಟಕ್ಕೆ ಮರಳುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News