ಪುಲ್ವಾಮಾ: ಭದ್ರತಾ ಪಡೆಗಳಿಂದ ಮೂವರು ಉಗ್ರರ ಹತ್ಯೆ
ಸಾಂದರ್ಭಿಕ ಚಿತ್ರ (PTI)
ಶ್ರೀನಗರ: ಗುರುವಾರ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನಾದೇರ್ ತ್ರಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ.
ಈ ಮೂವರು ಭಯೋತ್ಪಾದಕರು ಹಿಝ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಗುಂಪಿಗೆ ಸೇರಿದವರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭಯೋತ್ಪಾದಕರ ಗುರುತನ್ನು ಪೊಲೀಸರು ಇನ್ನಷ್ಟೇ ದೃಢಪಡಿಸಬೇಕಿದೆ.
ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ನಾದೇರ್ ತ್ರಾಲ್ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ನಿರ್ದಿಷ್ಟ ಗುಪ್ತಚರ ಮಾಹಿತಿಯನ್ನಾಧರಿಸಿ, ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ಅವಂತಿಪೋರದಲ್ಲಿ ಸುತ್ತುವರಿಯುವ ಹಾಗೂ ಶೋಧ ಕಾರ್ಯಾಚರಣೆ ನಡೆಸಿತು ಎಂದು ತಿಳಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಶ್ಮೀರ ಪೊಲೀಸರು, "ಅವಂತಿಪೋರದ ನಾದೇರ್‌ನ ತ್ರಾಲ್ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭಗೊಂಡಿದೆ. ಪೊಲೀಸರು ಹಾಗೂ ಭದ್ರತಾ ಪಡೆಗಳು ತಮ್ಮ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿವೆ. ಮತ್ತಷ್ಟು ವಿವರಗಳನ್ನು ಮುಂದೆ ಹಂಚಿಕೊಳ್ಳಲಾಗುವುದು" ಎಂದು ಹೇಳಿದ್ದಾರೆ.