×
Ad

ಪುಣೆ | ಮಹಿಳಾ ಪೊಲೀಸ್ ಅಧಿಕಾರಿಗೆ ಲೈಂಗಿಕ ಕಿರುಕುಳ : ಬಿಜೆಪಿ ನಾಯಕನ ವಿರುದ್ಧ ಪ್ರಕರಣ ದಾಖಲು

Update: 2025-06-26 14:48 IST

ಪ್ರಮೋದ್ ಕೊಂಧ್ರೆ (Photo credit: freepressjournal.in)

ಪುಣೆ: ಹಿರಿಯ ಮಹಿಳಾ ಪೊಲೀಸ್ ಅಧಿಕಾರಿಯೋರ್ವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಿಜೆಪಿ ಪುಣೆ ನಗರ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಮೋದ್ ಕೊಂಧ್ರೆ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಪ್ರಮೋದ್ ಕೊಂಧ್ರೆ ಕಾರ್ಯಕ್ರಮದ ಸಮಯದಲ್ಲಿ ಮಹಿಳಾ ಅಧಿಕಾರಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ.

ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳುತ್ತಿದ್ದಾರೆ.

ಘಟನೆಯ ಸಮಯದಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಸಲ್ಲಿಸಿದ ದೂರಿನ ಆಧಾರದ ಮೇಲೆ ಮಂಗಳವಾರ ರಾತ್ರಿ ಪುಣೆ ನಗರ ಪೊಲೀಸರು ಪ್ರಮೋದ್ ಕೊಂಧ್ರೆ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 74, ಸೆಕ್ಷನ್ 75 ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಮೋದ್ ಕೊಂಧ್ರೆ ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ. ಪುಣೆ ಬಿಜೆಪಿ ಬುಧವಾರ ಕೊಂಧ್ರೆ ಅವರನ್ನು ಪಕ್ಷದ ನಗರ ಘಟಕದ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ವಜಾಗೊಳಿಸಿದೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News