×
Ad

ಪ್ರಧಾನಿ ಹುದ್ದೆಗೆ ನನ್ನ ಆಯ್ಕೆ ರಾಹುಲ್ ಗಾಂಧಿ : ಮಲ್ಲಿಕಾರ್ಜುನ ಖರ್ಗೆ

Update: 2024-05-31 22:12 IST

ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ |  PC : PTI 

ಹೊಸದಿಲ್ಲಿ : ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದಲ್ಲಿ, ಪ್ರಧಾನಿ ಹುದ್ದೆಗೆ ನನ್ನ ಆಯ್ಕೆ ರಾಹುಲ್ ಗಾಂಧಿ ಎಂದು ಹೇಳುವ ಮೂಲಕ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಈ ಚುನಾವಣೆಯಲ್ಲಿ ‘ಭಾರತ್ ಜೋಡೊ ಯಾತ್ರೆ’ಯನ್ನು ಎರಡು ಬಾರಿ ಕೈಗೊಂಡಿದ್ದು ಪಕ್ಷಕ್ಕೆ, ಸಾಕಷ್ಟು ನೆರವಾಗಿದೆ. ರಾಹುಲ್ ಅವರು ಯುವ ಸಮುದಾಯವನ್ನು ಪ್ರತಿನಿಧಿಸುತ್ತಾರೆ. ದೇಶದ ಉದ್ದಗಲ ಸಂಚರಿಸಿದ್ದಾರೆ. ಜನರ ಕಷ್ಟವನ್ನು ಅರಿತಿದ್ದಾರೆ. ಮೈತ್ರಿಯ ವಿಚಾರದಲ್ಲಿ ರಾಹುಲ್ ನಡೆ, ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿ ದಾಳಿಯನ್ನು ಸಮರ್ಥವಾಗಿ ನಿಭಾಯಿಸಿ, ಎದುರಿಸಿದ ರೀತಿ, ಅವರೇ ಈ ಹುದ್ದೆಗೆ ಸೂಕ್ತ’ ಎಂದು ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News