ಕೇಂದ್ರ ಬಜೆಟ್ 2026 | ಭಾರತದ ನಿಜವಾದ ಸಮಸ್ಯೆಗಳ ಬಗ್ಗೆ ಕುರುಡಾಗಿದೆ: ರಾಹುಲ್ ಗಾಂಧಿ
Image Source : pti
ಹೊಸದಿಲ್ಲಿ, ಫೆ. 1: 2026-27 ಸಾಲಿನ ಕೇಂದ್ರ ಬಜೆಟ್ ಅನ್ನು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ರವಿವಾರ ತೀವ್ರವಾಗಿ ಟೀಕಿಸಿದ್ದಾರೆ.
ಈ ಬಜೆಟ್ ‘‘ಭಾರತದ ನಿಜವಾದ ಸಮಸ್ಯೆಗಳ ಬಗ್ಗೆ ಕುರುಡಾಗಿದೆ’’ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಸಾಮಾನ್ಯ ಜನರು ಎದುರಿಸುವ ತೀವ್ರ ಆರ್ಥಿಕ ಸಂಕಷ್ಟಗಳನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸಿದೆ ಎಂದು ಅವರು ಆರೋಪಿಸಿದ್ದಾರೆ.
‘ಎಕ್ಸ್’ನ ಪೋಸ್ಟ್‌ನಲ್ಲಿ ಅವರು ದೇಶ ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಬಗ್ಗೆ ವಿವರಿಸಿದ್ದಾರೆ. ಅನೇಕ ಯುವಕರು ಉದ್ಯೋಗವಿಲ್ಲದೆ ಇದ್ದಾರೆ. ಉತ್ಪಾದನಾ ವಲಯ ಕುಸಿಯುತ್ತಿದೆ. ಹೂಡಿಕೆದಾರರು ಬಂಡವಾಳ ಹಿಂದಕ್ಕೆ ತೆಗೆದುಕೊಳ್ಳುತ್ತಿದ್ದಾರೆ. ಕುಟುಂಬಗಳ ಉಳಿತಾಯ ತೀವ್ರವಾಗಿ ಕುಸಿಯುತ್ತಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಜಾಗತಿಕ ಆಘಾತ ಸಂಭವಿಸುವ ಸಾಧ್ಯತೆ ಇದೆ. ಇವೆಲ್ಲವನ್ನೂ ನಿರ್ಲಕ್ಷಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ಬಜೆಟ್ ಹಿಂದಿನ ಪ್ರಮಾದವನ್ನು ಸರಿಪಡಿಸಿಕೊಳ್ಳಲು ಪ್ರಯತ್ನಿಸಿಲ್ಲ. ಭಾರತದ ನಿಜವಾದ ಸಮಸ್ಯೆಗಳ ಬಗ್ಗೆ ಕುರುಡಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.