×
Ad

ರಾಹುಲ್‌ ಗಾಂಧಿ ಅಮೇಥಿಯಿಂದಲೇ ಸ್ಪರ್ಧಿಸಲಿದ್ದಾರೆ: ಉತ್ತರ ಪ್ರದೇಶದ ಕಾಂಗ್ರೆಸ್‌ ನಾಯಕ

Update: 2024-03-06 11:35 IST

Photo: PTI

ಲಕ್ನೊ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ 2002ರಿಂದ ತಾನು ಹಲವಾರು ಬಾರಿ ಪ್ರತಿನಿಧಿಸಿದ್ದ ಅಮೇಥಿ ಲೋಕಸಭಾ ಕ್ಷೇತ್ರದಿಂದಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ. 2002ರಿಂದ 2019ರವರೆಗೆ ಅಮೇಥಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ರಾಹುಲ್ ಗಾಂಧಿ, 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಎದುರು ಪರಾಭವಗೊಂಡಿದ್ದರು.

ದಿಲ್ಲಿಯಲ್ಲಿ ನಡೆದ ಸಭೆಯ ಮುಕ್ತಾಯದ ನಂತರ ಮರಳಿ ಬಂದಿರುವ ಅಮೇಥಿ ಜಿಲ್ಲಾಧ್ಯಕ್ಷ ಪ್ರದೀಪ್ ಸಿಂಘಾಲ್, ರಾಹುಲ್ ಗಾಂಧಿ ಅಮೇಥಿ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದು, ಅವರ ಹೆಸರನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News