×
Ad

ಭಾರತ-ಪಾಕಿಸ್ತಾನ ಸಂಘರ್ಷ: ಸರ್ವಪಕ್ಷ ಸಭೆ, ವಿಶೇಷ ಅಧಿವೇಶನ ಕರೆಯುವಂತೆ ಕಾಂಗ್ರೆಸ್ ಆಗ್ರಹ

Update: 2025-05-11 14:51 IST

Photo credit: PTI

ಹೊಸದಿಲ್ಲಿ: ಪಹಲ್ಗಾಮ್ ದಾಳಿ, ಆಪರೇಷನ್ ಸಿಂಧೂರ್ ಹಾಗೂ ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದ ಕುರಿತಂತೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರ ಅಧ್ಯುಕ್ಷತೆಯಲ್ಲಿ ಸರ್ವಪಕ್ಷ ಸಭೆ ಹಾಗೂ ವಿಶೇಷ ಸಂಸತ್ ಅಧಿವೇಶನ ಕರೆಯಬೇಕು ಎಂದು ರವಿವಾರ ಕಾಂಗ್ರೆಸ್ ಆಗ್ರಹಿಸಿದೆ.

ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಸರಕಾರಕ್ಕೆ ಹಲವು ಪ್ರಶ್ನೆಗಳನ್ನು ಕೇಳಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್, “ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದದ ಬಗ್ಗೆ ಚರ್ಚಿಸಲು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ತಟಸ್ಥ ವೇದಿಕೆಗಾಗಿ ಕರೆ ನೀಡಿರುವುದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಹಾಗಾದರೆ, ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ಬಗೆಹರಿಸಲು ಮೂರನೆಯ ವ್ಯಕ್ತಿಗಳಿಗೆ ಮಧ್ಯಸ್ಥಿಕೆಯ ಬಾಗಿಲು ತೆರೆದಿದೆಯೆ, ಆ ಮೂಲಕ ಶಿಮ್ಲಾ ಒಪ್ಪಂದವನ್ನು ಮುರಿಯಲಾಗಿದೆಯೆ, ಭಾರತ ಮತ್ತು ಪಾಕಿಸ್ತಾನದ ನಡುವೆ ರಾಜತಾಂತ್ರಿಕ ಮಾರ್ಗಗಳನ್ನು ತೆರೆಯಲಾಗಿದೆಯೆ, ಯಾವ ಬದ್ಧತೆಯನ್ನು ಬಯಸಿದ್ದೆವು, ಯಾವುದನ್ನು ಪಡೆಯುತ್ತಿದ್ದೇವೆ” ಎಂದು ಸರಣಿ ಪ್ರಶ್ನೆಗಳನ್ನು ಸರಕಾರಕ್ಕೆ ಎಸೆದಿದ್ದಾರೆ.

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಕುರಿತು ಚರ್ಚಿಸಲು ವಿಶೇಷ ಸಂಸತ್ ಅಧಿವೇಶನ ಕರೆಯಬೇಕು ಎಂದು ಆಗ್ರಹಿಸಿ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News