×
Ad

ನಾಳೆ ವಯನಾಡಿಗೆ ರಾಹುಲ್, ಪ್ರಿಯಾಂಕಾ ಭೇಟಿ

Update: 2024-07-31 22:21 IST

ರಾಹುಲ್‌ಗಾಂಧಿ ,  ಪ್ರಿಯಾಂಕಾ ಗಾಂಧಿ | PTI 

ಹೊಸದಿಲ್ಲಿ : ಭೀಕರ ಸರಣಿ ಭೂಕುಸಿತ ದುರಂತಕ್ಕೆ ಸಾಕ್ಷಿಯಾದ ವಯನಾಡಿಗೆ ಕಾಂಗ್ರೆಸ್ ಸಂಸದ ರಾಹುಲ್‌ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಭೇಟಿ ನೀಡಲಿದ್ದಾರೆ.

ಹಾಲಿ ಲೋಕಸಭಾ ಚುನಾವಣೆಯಲ್ಲಿ ವಯನಾಡ್ ಹಾಗೂ ಆಮೇಠಿ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಎರಡರಲ್ಲೂ ಭರ್ಜರಿ ಗೆಲುವು ಸಾಧಿಸಿದ್ದರು. ಆನಂತರ ಅವರು ಅಮೇಠಿ ಕ್ಷೇತ್ರವನ್ನು ಉಳಿಸಿಕೊಂಡು, ವಯನಾಡು ಕ್ಷೇತ್ರದ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ತೆರವಾಗಿರುವ ವಯನಾಡ್ ಕ್ಷೇತ್ರದಲ್ಲಿ ಪ್ರಿಯಾಂಕಾ ಅವರು ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

ರಾಹುಲ್‌ಹಾಗೂ ಪ್ರಿಯಾಂಕಾ ಬುಧವಾರ ಬೆಳಗ್ಗೆ ವಿಕೋಪ ಪೀಡಿತ ಸ್ಥಳಗಳಿಗೆ ಭೇಟಿ ನೀಡುವವರಿದ್ದರು. ಆದರೆ ಪ್ರದೇಶದಲ್ಲಿನ ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ತಮ್ಮ ಪ್ರಯಾಣವನ್ನು ಒಂದು ದಿನ ಮುಂದೂಡಿದ್ದಾರೆ.

ಮೆಪ್ಪಡಿಯಲ್ಲಿರುವ ಸರಕಾರಿ ಹಿರಿಯ ಮಾಧ್ಯಮಿಕ ಶಾಲೆ ಹಾಗೂ ಸೈಂಟ್ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಥಾಪಿಸಲಾಗಿರುವ ಪರಿಹಾರ ಶಿಬಿರಗಳಿಗೆ ರಾಹುಲ್ ಹಾಗೂ ಪ್ರಿಯಾಂಕಾ ಭೇಟಿ ನೀಡುವ ನಿರೀಕ್ಷೆಯಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News