×
Ad

ಕೇರಳದಲ್ಲಿ ತೀವ್ರಗೊಳ್ಳಲಿರುವ ಮಳೆ | ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ ಐಎಂಡಿ

Update: 2024-05-16 21:24 IST

ಸಾಂದರ್ಭಿಕ ಚಿತ್ರ (PTI)

 

ತಿರುವನಂತಪುರ: ಕೇರಳದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಗುರುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 18ರಿಂದ ಮೇ 20ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಭಾರತೀಯ ಹವಾಮಾನ ಇಲಾಖೆ ಮೇ 18ರಂದು ಪಾಲಕ್ಕಾಡ್ ಹಾಗೂ ಮಲಪ್ಪುರಂ, ಮೇ 19ರಂದು ಪತ್ತನಂತಿಟ್ಟ, ಆಲಪ್ಪುಳ ಹಾಗೂ ಇಡುಕ್ಕಿ, ಮೇ 20ರಂದು ರಾಜ್ಯದ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.

ಮೇ 20ರಂದು ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಮುನ್ನೆಚ್ಚರಿಕೆ ನೀಡಿದ್ದರೂ ರೆಡ್ ಅಲರ್ಟ್ ನಂತೆಯೇ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News