×
Ad

ರಾಜಸ್ಥಾನ | ಫ್ಲೈ ಓವರ್ ಗೋಡೆಗೆ ಬಸ್ ಢಿಕ್ಕಿ ; 12 ಮಂದಿ ಪ್ರಯಾಣಿಕರು ಮೃತ್ಯು

Update: 2024-10-29 18:08 IST
PC : indiatv.in

ಜೈಪುರ : ಸಿಕಾರ್ನಲ್ಲಿ ಫ್ಲೈ ಓವರ್ ಗೋಡೆಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 12 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಸ್ಥಾದ ಸಲಾಸರ್ ನಿಂದ ತೆರಳುತ್ತಿದ್ದ ಬಸ್, ಸಿಕರ್ ಜಿಲ್ಲೆಯ ಲಕ್ಷ್ಮಣಗಢ ಬಳಿ ಫ್ಲೈ ಓವರ್ ಗೋಡೆಗೆ ಢಿಕ್ಕಿಯಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಲಕ್ಷ್ಮಣಗಢದ ಸರ್ಕಾರಿ ಕಲ್ಯಾಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಇದುವರೆಗೆ 12 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ಆಸ್ಪತ್ರೆಯ ಅಧೀಕ್ಷಕ ಮಹೇಂದ್ರ ಖಿಚಡ್ ತಿಳಿಸಿದ್ದಾರೆ.

ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ ಮುಖ್ಯಮಂತ್ರಿ ಭಜನಲಾಲ್ ಶರ್ಮಾ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News