×
Ad

ನೀಟ್ ಫಲಿತಾಂಶ ಪ್ರಕಟ: ರಾಜಸ್ಥಾನದ ಮಹೇಶ್ ಕುಮಾರ್ ದೇಶಕ್ಕೆ ಪ್ರಥಮ

Update: 2025-06-14 16:31 IST

ಮಹೇಶ್ ಕುಮಾರ್ (Photo credit: NDTV)

ಹೊಸದಿಲ್ಲಿ : ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಾತಿಗಾಗಿ ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ರಾಜಸ್ಥಾನದ ಮಹೇಶ್ ಕುಮಾರ್ ದೇಶಕ್ಕೆ ಮೊದಲ ಸ್ಥಾನ ಮತ್ತು ಮಧ್ಯಪ್ರದೇಶದ ಉತ್ಕರ್ಷ್ ಅವಧಿಯಾ 2ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NAT) ಶನಿವಾರ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ. ಈ ಬಾರಿ 22.09 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅವರಲ್ಲಿ 12.36 ಲಕ್ಷ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಕಡಿಮೆ ಫಲಿತಾಂಶ ದಾಖಲಾಗಿದೆ. ಕಳೆದ ವರ್ಷ 23.33 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. 13.15 ಲಕ್ಷ ಅಭ್ಯರ್ಥಿಗಳು ತೇರ್ಗಡೆಯಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News