ರಾಜಸ್ಥಾನ ಸಿಎಂ ಭಜನ್ ಲಾಲ್ ಶರ್ಮಾಗೆ ದೌಸಾ ಜೈಲಿನಿಂದ ಜೀವ ಬೆದರಿಕೆ ಕರೆ
Update: 2025-02-22 11:14 IST
Photo | PTI
ಜೈಪುರ : ರಾಜಸ್ಥಾನದ ದೌಸಾದ ಸಲಾಸ್ವಾಲ್ ಜೈಲಿನಿಂದ ಕೈದಿಯೋರ್ವ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ರಿಂಕು(29) ಎಂಬ ಕೈದಿ ಜೈಲಿನಿಂದಲೇ ಜೈಪುರ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಸಿಎಂಗೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ಬೆದರಿಕೆ ಕರೆ ಬಂದ ಮೊಬೈಲ್ ಲೊಕೇಶನ್ ಪರಿಶೀಲಿಸಿದಾಗ ದೌಸಾದ ಜೈಲನ್ನು ತೋರಿಸಿದೆ. ಪೊಲೀಸರು ಜೈಲಿನಲ್ಲಿ ಶೋಧ ಕಾರ್ಯಾಚರಣೆ ನಡೆಸಿದಾಗ ಮೊಬೈಲ್ ಪೋನ್ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಕೊಲೆ ಬೆದರಿಕೆಯ ಹಿಂದಿನ ಉದ್ದೇಶ ಅಸ್ಪಷ್ಟವಾಗಿದೆ, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.