×
Ad

ರಾಮ ಮಂದಿರ ಉದ್ಘಾಟನೆ: ಖರ್ಗೆ,ಸೋನಿಯಾ ಪಾಲ್ಗೊಳ್ಳುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ: ಕಾಂಗ್ರೆಸ್

Update: 2023-12-29 22:50 IST

ಮಲ್ಲಿಕಾರ್ಜುನ ಖರ್ಗೆ ,ಸೋನಿಯಾ ಗಾಂಧಿ | Photo: PTI 

ಹೊಸದಿಲ್ಲಿ: ಅಯೋಧ್ಯೆಯಲ್ಲಿ ಜ.22ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾಗವಹಿಸುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ಶುಕ್ರವಾರ ತಿಳಿಸಿದೆ.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಂ ರಮೇಶ್ ಅವರು, ಖರ್ಗೆ ಮತ್ತು ಸೋನಿಯಾ ಅವರನ್ನು ರಾಮಮಂದಿರ ಉದ್ಘಾಟನೆಗೆ ಆಹ್ವಾನಿಸಲಾಗಿದೆ. ಅವರು ಪಾಲ್ಗೊಳ್ಳುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅದೀರ ರಂಜನ್ ಚೌಧುರಿ ಅವರನ್ನೂ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News