×
Ad

ರಾಮ ಮಂದಿರ ಪ್ರಾಣಪ್ರತಿಷ್ಠೆ ಪ್ರಯುಕ್ತ ಜ. 22ರಂದು ಕೇಂದ್ರ ಸರ್ಕಾರಿ ಕಚೇರಿಗಳು, ಸಂಸ್ಥೆಗಳಿಗೆ ಅರ್ಧ ದಿನ ರಜೆ ಘೋಷಿಸಿದ ಸರ್ಕಾರ

Update: 2024-01-18 16:06 IST

Photo: PTI

ಹೊಸದಿಲ್ಲಿ: ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ಶ್ರೀ ರಾಮ ಮಂದಿರ ಪ್ರಾಣಪ್ರತಿಷ್ಠಾ ಸಮಾರಂಭದ ಪ್ರಯುಕ್ತ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಸಿಗಲಿದೆ ಎಂದು hindustantimes.com ವರದಿ ಮಾಡಿದೆ.

ಜನವರಿ 22ರಂದು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು ಅರ್ಧ ದಿನ ಮುಚ್ಚಲಿವೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಹೇಳಿದ್ದಾರೆ. ಜನರ ಭಾವನೆಗಳನ್ನು ಅರ್ಥಮಾಡಿಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದೂ ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಕಚೇರಿಗಳು, ಕೇಂದ್ರ ಸರ್ಕಾರಿ ಸಂಸ್ಥೆಗಳು ಹಾಗೂ ಕೇಂದ್ರ ಸರ್ಕಾರ ಒಡೆತನದ ಕೈಗಾರಿಕಾ ಸಂಸ್ಥೆಗಳಿಗೆ ಜನವರಿ 22ರಂದು ಅಪರಾಹ್ನ 2.30ರ ತನಕ ಅರ್ಧ ದಿನ ರಜೆ ನೀಡಲಾಗಿದೆ ಎಂದು ಸರ್ಕಾರದ ಆದೇಶ ತಿಳಿಸಿದೆ.

ಅಯೋಧ್ಯೆಯಲ್ಲಿ ಪ್ರಾಣಪ್ರತಿಷ್ಠಾ ಕಾರ್ಯಕ್ರಮ ಅಪರಾಹ್ನ 12.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಲವು ಗಣ್ಯರ ಉಪಸ್ಥಿತಿಯಲ್ಲಿ ನೆರವೇರಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News