ʼಡಾಬರ್ʼ ಉತ್ಪನ್ನದ ಕುರಿತು ದಾರಿತಪ್ಪಿಸುವ ಜಾಹೀರಾತುಗಳನ್ನು ಪ್ರಸಾರ ಮಾಡದಂತೆ ಪತಂಜಲಿಗೆ ದಿಲ್ಲಿ ಹೈಕೋರ್ಟ್ ನಿರ್ಬಂಧ
Update: 2025-07-03 11:52 IST
ಯೋಗಗುರು ರಾಮದೇವ್ (Photo: PTI)
ಹೊಸದಿಲ್ಲಿ: ʼಡಾಬರ್ ಚ್ಯವನಪ್ರಾಶ್ʼ ಅನ್ನು ಗುರಿಯಾಗಿಸಿಕೊಂಡು ಯಾವುದೇ ದಾರಿತಪ್ಪಿಸುವ ಜಾಹೀರಾತುಗಳನ್ನು ಪ್ರಸಾರ ಮಾಡದಂತೆ ಯೋಗಗುರು ರಾಮದೇವ್ ಅವರ ಪತಂಜಲಿ ಆಯುರ್ವೇದ ಸಂಸ್ಥೆಗೆ ದಿಲ್ಲಿ ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ನಿರ್ಬಂಧಿಸಿದೆ.
ಪತಂಜಲಿ ತನ್ನ ಜನಪ್ರಿಯ ಉತ್ಪನ್ನಗಳಲ್ಲಿ ಒಂದರ ಬಗ್ಗೆ ಅವಹೇಳನಕಾರಿ ಜಾಹೀರಾತುಗಳನ್ನು ನಡೆಸುತ್ತಿದೆ ಎಂದು ಆರೋಪಿಸಿ ಡಾಬರ್ ಸಲ್ಲಿಸಿದ ಅರ್ಜಿಯ ಮೇರೆಗೆ ನ್ಯಾಯಮೂರ್ತಿ ಮಿನಿ ಪುಷ್ಕರ್ಣ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.
ಜಾಹೀರಾತಿನಲ್ಲಿ, ಆಯುರ್ವೇದ ಗ್ರಂಥಗಳು ಮತ್ತು ಶಾಸ್ತ್ರೀಯ ಪಠ್ಯಗಳ ಪ್ರಕಾರ ಚ್ಯವನಪ್ರಾಶ್ ತಯಾರಿಸಿದ ಏಕೈಕ ಸಂಸ್ಥೆ ಪತಂಜಲಿ ಎಂದು ಹೇಳಿಕೊಂಡಿದೆ ಎಂದು ಆರೋಪಿಸಲಾಗಿತ್ತು.