×
Ad

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ | ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ

Update: 2024-04-12 21:58 IST

PC : PTI 

ಕೋಲ್ಕತ್ತಾ : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಇಬ್ಬರು ಆರೋಪಿಗಳನ್ನು ಇಲ್ಲಿನ ಮೆಟ್ರೋಪಾಲಿಟಿನ್ ನ್ಯಾಯಾಲಯದ ಮುಂದೆ ಶುಕ್ರವಾರ ಹಾಜರುಪಡಿಸುವ ಮುನ್ನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.

ಟ್ರಾನ್ಸಿಟ್ ಡಿಮಾಂಡ್ಗಾಗಿ ಆರೋಪಿಗಳನ್ನು ಇಲ್ಲಿನ ಬ್ಯಾಂಕ್ಶಾಲ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ಎಂದು ಎನ್ಐಎಯ ವಕೀಲರು ತಿಳಿಸಿದ್ದಾರೆ.

ಇಬ್ಬರು ಆರೋಪಿಗಳಾದ ಮುಸ್ಸಾವಿರ್ ಹುಸೈನ್ ಶಾಝಿಬ್ ಹಾಗೂ ಅಬ್ದುಲ್ ಮತೀನ್ ಅಹ್ಮದ್ ತಾಹಾ ಅವರನ್ನು ವೈದ್ಯಕೀಯ ಪರೀಕ್ಷೆಗೆ ಬಿಧಾನಗರದಲ್ಲಿರುವ ಸರಕಾರಿ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News