ಜಾರ್ಖಂಡ್ | ಅಕ್ರಮ ಕಲ್ಲಿದ್ದಲು ಗಣಿ ಕುಸಿತ : ಓರ್ವ ಮೃತ್ಯು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ
Update: 2025-07-05 11:52 IST
Photo credit: PTI
ರಾಮಗಢ : ಜಾರ್ಖಂಡ್‌ನ ರಾಮಗಢ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಯ ವೇಳೆ ಕಲ್ಲಿದ್ದಲು ಗಣಿಯ ಒಂದು ಭಾಗ ಕುಸಿದು ಓರ್ವ ಮೃತಪಟ್ಟಿದ್ದು, ಗಣಿಯಲ್ಲಿ ಹಲವರು ಸಿಲುಕಿಕೊಂಡಿರುವ ಸಾಧ್ಯತೆ ಇದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದುವರೆಗೆ ಒಂದು ಮೃತದೇಹವನ್ನು ಹೊರತೆಗೆಯಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಅವಶೇಷಗಳಡಿ ಹೆಚ್ಚಿನ ಜನರು ಸಿಲುಕಿಕೊಂಡಿರುವ ಶಂಕೆ ಇದೆ ಎಂದು ಕುಜು ಪೊಲೀಸ್ ಹೊರಠಾಣೆ ಉಸ್ತುವಾರಿ ಅಶುತೋಷ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ರಾಮಗಢ ಜಿಲ್ಲಾಧಿಕಾರಿ ಫೈಝ್ ಅಕ್ ಅಹ್ಮದ್ ಮುಮ್ತಾಝ್, ಘಟನೆಯ ಬಗ್ಗೆ ನಮಗೆ ಬೆಳಿಗ್ಗೆ ಮಾಹಿತಿ ಸಿಕ್ಕಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳಕ್ಕೆ ಅಧಿಕಾರಿಗಳ ತಂಡವನ್ನು ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.