×
Ad

ಸಾಲ ಮರುಪಾವತಿಸಲು ವಿಫಲವಾದ ವ್ಯಕ್ತಿಯ ಪತ್ನಿ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

Update: 2023-07-27 13:35 IST

ಪುಣೆ: ಮಹಾರಾಷ್ಟ್ರದ ಪುಣೆ ನಗರದಲ್ಲಿ 47 ವರ್ಷದ ಲೇವಾದೇವಿಗಾರನೊಬ್ಬ ತನ್ನಿಂದ ಸಾಲ ಪಡೆದ ವ್ಯಕ್ತಿ ಹಣ ಮರುಪಾವತಿಸಲು ವಿಫಲವಾದ ಕಾರಣ ಆತನ ಪತ್ನಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.

ಈ ವರ್ಷದ ಫೆಬ್ರವರಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮಹಿಳೆಯ ಪತಿ ಸಾಲ ಪಡೆದಿದ್ದನು, ಆದರೆ ಅದನ್ನು ಮರುಪಾವತಿಸಲು ಸಾಧ್ಯವಾಗಲಿಲ್ಲ.

ಆರೋಪಿಯು ಮಹಿಳೆಯ ಪತಿಗೆ ಚಾಕು ತೋರಿಸಿ ಬೆದರಿಸಿ ನಂತರ ಆತನ ಸಮ್ಮುಖದಲ್ಲೇ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿ ಈ ಕೃತ್ಯವನ್ನು ಮೊಬೈಲ್ ಫೋನ್ ನಲ್ಲಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾವು ಆರೋಪಿಗಳನ್ನು ಬಂಧಿಸಿದ್ದೇವೆ ಮತ್ತು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News