×
Ad

ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ : ವರದಿ

Update: 2024-10-09 19:51 IST

 ರತನ್ ಟಾಟಾ | PTI

ಮುಂಬೈ : ಭಾರತದ ಅತಿ ದೊಡ್ಡ ಸಮೂಹ ಸಂಸ್ಥೆ ಟಾಟಾ ಸನ್ಸ್ ನ ಗೌರವಾಧ್ಯಕ್ಷ ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮುಂಬೈನ ಆಸ್ಪತ್ರೆಯೊಂದರ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

86 ವರ್ಷದ ರತನ್ ಟಾಟಾ ಅವರು ತಮ್ಮ ವೃದ್ಧಾಪ್ಯ ಸಂಬಂಧಿ ಕಾಯಿಲೆಗಳಿಗೆ ಸೋಮವಾರ ದೈನಂದಿನ ಚಿಕಿತ್ಸೆಗೊಳಗಾಗಿದ್ದರು ಎಂದು ಹೇಳಲಾಗಿದೆ.

1991ರಲ್ಲಿ ಟಾಟಾ ಸನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷರಾಗಿದ್ದ ರತನ್ ಟಾಟಾ, ತಮ್ಮ ಸಂಸ್ಥೆಯನ್ನು 100 ಬಿಲಿಯನ್ ಡಾಲರ್ ಮೌಲ್ಯದ ಜಾಗತಿಕ ದರ್ಜೆಯ ಸಾಮ್ರಾಜ್ಯವನ್ನಾಗಿ ವಿಸ್ತರಿಸಿದ್ದರು. ಡಿಸೆಂಬರ್ 2012ರಲ್ಲಿ ಟಾಟಾ ಸನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷ ಹುದ್ದೆಯಿಂದ ನಿವೃತ್ತರಾಗಿದ್ದ ರತನ್ ಟಾಟಾ, ನಂತರ ಗೌರವಾಧ್ಯಕ್ಷರಾಗಿ ನೇಮಕಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News