×
Ad

ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ ; ಮೇಲ್ವಿಚಾರಣೆ ಕೋರಿ ಸಲ್ಲಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ

Update: 2024-01-09 21:14 IST

ನರೇಂದ್ರ ದಾಭೋಲ್ಕರ್‌ (Photo credit: thewire.in)

ಹೊಸದಿಲ್ಲಿ: ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆಗೆ ಸಂಬಂಧಿಸಿದ ತನಿಖೆ ಹಾಗೂ ವಿಚಾರಣೆಯ ಮೇಲ್ವಿಚಾರಣೆ ಪುನರಾರಂಭಿಸಲು ಬಾಂಬೆ ಉಚ್ಛ ನ್ಯಾಯಾಲಯಕ್ಕೆ ನಿರ್ದೇಶಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

2023 ಎಪ್ರಿಲ್ ನಲ್ಲಿ ಬಾಂಬೆ ಉಚ್ಛ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮುಕ್ತಾ ದಾಭೋಲ್ಕರ್ ಹಾಗೂ ಇತರರು ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಹಾಗೂ ಸತೀಶ್ ಚಂದ್ರ ಶರ್ಮಾ ಅವರನ್ನು ಒಳಗೊಂಡ ಪೀಠ ತಿರಸ್ಕರಿಸಿತು.

ನರೇಂದ್ರ ದಾಭೋಲ್ಕರ್ ಅವರ ಹತ್ಯೆ ಪ್ರಕರಣದ ಪ್ರಗತಿಯ ಮೇಲ್ವಿಚಾರಣೆಯನ್ನು ಮುಂದುವರಿಸಲು ಬಾಂಬೆ ಉಚ್ಛ ನ್ಯಾಯಾಲಯ ನಿರಾಕರಿಸಿದ ಹಿನ್ನೆಲೆಯಲ್ಲಿ ಮುಕ್ತಾ ದಾಭೋಲ್ಕರ್ ಹಾಗೂ ಇತರರು ಸುಪ್ರೀಂ ಕೋರ್ಟ್ನ ಮೆಟ್ಟಿಲೇರಿದ್ದರು.

ಈ ಪ್ರಕರಣದ ಮಧ್ಯಪ್ರವೇಶಿಸಲು ಒಲವು ಹೊಂದಿಲ್ಲ ಎಂದು ಪೀಠ ಹೇಳಿದೆ. ಆದರೆ, ಪ್ರಕರಣದ ಪ್ರಗತಿಗೆ ಉಪಯುಕ್ತವಾದ ಯಾವುದೇ ದಾಖಲೆಗಳನ್ನು ಒದಗಿಸುವ ಅವಕಾಶವನ್ನು ದೂರುದಾರರಿಗೆ ಮುಕ್ತವಾಗಿ ಇರಿಸಿದೆ.

ಅತಿ ದೊಡ್ಡ ಪಿತೂರಿಗೆ ಸಂಬಂಧಿಸಿದ ಈ ಪ್ರಕರಣದ ಮೇಲ್ವಿಚಾರಣೆ ನಡೆಸುವುದನ್ನು ಉಚ್ಛ ನ್ಯಾಯಾಲಯ ನಿಲ್ಲಿಸಿದೆ ಎಂದು ದೂರುದಾರರನ್ನು ಪ್ರತಿನಿಧಿಸಿದ್ದ ನ್ಯಾಯವಾದಿ ಪ್ರತಿಪಾದಿಸಿದರು.

ಸಿಬಿಐ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ, ಈಗ ಪಾಟಿ ಸವಾಲು ನಡೆಯುತ್ತಿದೆ ಎಂದು ಪ್ರತಿಪಾದಿಸಿದರು. ಸಿಬಿಐ ಪ್ರಕರಣದ ವಿಚಾರಣೆಯನ್ನು ಕೈಬಿಡುವುದಿಲ್ಲ. ವಿಚಾರಣೆ ಅಂತಿಮ ಹಂತಕ್ಕೆ ತಲುಪುತ್ತಿದೆ ಎಂದು ಅವರು ಹೇಳಿದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News