×
Ad

ರೆಪೋ ದರ ಇಳಿಕೆ ಮಾಡಿದ ಆರ್‌ಬಿಐ : ಗೃಹ, ವಾಹನ ಸಾಲಗಾರರಿಗೆ ಶುಭಸುದ್ದಿ!

Update: 2025-12-05 12:20 IST

ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ (Photo credit: PTI)

ಮುಂಬೈ: ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಆರು ತ್ರೈಮಾಸಿಕಗಳ ಗರಿಷ್ಠ ಮಟ್ಟವಾದ ಶೇ.8.2ಕ್ಕೆ ಏರಿಕೆಯಾಗಿದೆ. ಆರ್ಥಿಕ ಬೆಳವಣಿಗೆಯನ್ನು ಮತ್ತಷ್ಟು ಹೆಚ್ಚಿಸುವ ಪ್ರಯತ್ನವಾಗಿ ಆರ್‌ಬಿಐ ಶುಕ್ರವಾರ ರೆಪೋ ದರದಲ್ಲಿ 25 ಮೂಲಾಂಶವನ್ನು ಕಡಿತಗೊಳಿಸಿದೆ. ಇದರಿಂದ ರೆಪೋ ದರ ಶೇ. 5.50ರಿಂದ ಶೇ 5.25ಕ್ಕೆ ಇಳಿಕೆಯಾಗಿದೆ.

ಈ ಬೆಳವಣಿಗೆಯಿಂದ ಗೃಹ ಸಾಲ, ವಾಹನ ಸಾಲ ಹಾಗೂ ವಾಣಿಜ್ಯ ಸಾಲಗಳು ಇನ್ನಷ್ಟು ಅಗ್ಗವಾಗಲಿವೆ ಎಂದು ನಿರೀಕ್ಷಿಸಲಾಗಿದೆ.

ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಪ್ರಸಕ್ತ ಹಣಕಾಸು ವರ್ಷದ ಐದನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಘೋಷಿಸಿದ್ದಾರೆ. ಹಣಕಾಸು ನೀತಿ ಸಮಿತಿ (MPC) ಒಮ್ಮತದಿಂದ ರೆಪೋ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಇದರಿಂದ ರೆಪೋ ದರ ಶೇ.5.25ಕ್ಕೆ ಇಳಿದಿದೆ ಎಂದು ತಿಳಿಸಿದ್ದಾರೆ.

ಗ್ರಾಹಕ ಬೆಲೆ ಸೂಚ್ಯಂಕ(ಸಿಪಿಐ) ಆಧಾರಿತ ಚಿಲ್ಲರೆ ಹಣದುಬ್ಬರವು ಕಳೆದ ಮೂರು ತಿಂಗಳುಗಳಿಂದ ಶೇ 2ಕ್ಕಿಂತ ಕಡಿಮೆ ಆಗಿರುವುದರಿಂದ ದರ ಕಡಿತ ಸಾಧ್ಯವಾಗಿದೆ ಎಂದು ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News