×
Ad

ಮುಸ್ಲಿಂ ಶಾಸಕರ ಬಗ್ಗೆ ವಿವಾದಾತ್ಮಕ ಹೇಳಿಕೆ : ಸುವೇಂದು ಅಧಿಕಾರಿ ವಿರುದ್ಧ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ನಿಲುವಳಿ ಅಂಗೀಕಾರ

Update: 2025-03-13 18:31 IST

 ಸುವೇಂದು ಅಧಿಕಾರಿ | (Photo: PTI)

ಕೋಲ್ಕತ್ತಾ : ಮುಸ್ಲಿಂ ಶಾಸಕರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ವಿರುದ್ಧ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮಂಡಿಸಿದ ನಿಲುವಳಿಯನ್ನು ಪಶ್ಚಿಮ ಬಂಗಾಳ ವಿಧಾನಸಭೆ ಗುರುವಾರ ಅಂಗೀಕರಿಸಿದೆ.

ಟಿಎಂಸಿಯ ಸಚೇತಕ ನಿರ್ಮಲ್ ಘೋಷ್ ಅವರು ಸುವೇಂದು ವಿರುದ್ಧ ನಿಲುವಳಿ ಮಂಡಿಸಿದರು. ಸುವೇಂದು ಅಧಿಕಾರಿ ದೇಶದ ಧಾರ್ಮಿಕ ಮತ್ತು ಸಾಮಾಜಿಕ ರಚನೆಯ ಮೇಲೆ ದಾಳಿ ಮಾಡಿದ್ದಾರೆ ಎಂದು ಹೇಳಿದರು. ಸದನವು ಧ್ವನಿ ಮತದ ಮೂಲಕ ನಿಲುವಳಿಯನ್ನು ಅಂಗೀಕರಿಸಿತು.

ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಬಂಗಾಳ ವಿಧಾನ ಸಭೆಯಿಂದ ತೃಣಮೂಲ ಕಾಂಗ್ರೆಸ್‌ನ ಮುಸ್ಲಿಂ ಶಾಸಕರನ್ನು ಹೊರಹಾಕಲಾಗುವುದು ಎಂದು ಸುವೇಂದು ಅಧಿಕಾರಿ ಹೇಳಿದ್ದರು. ಬಿಜೆಪಿ ನಾಯಕನ ಹೇಳಿಕೆ ರಾಜ್ಯದಲ್ಲಿ ಭಾರೀ ಟೀಕೆಗೆ ಕಾರಣವಾಯಿತು. ಸುವೇಂದು ವಿರುದ್ಧ ವಾಗ್ಧಾಳಿ ನಡೆಸಿದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಿಜೆಪಿ ರಾಜ್ಯಕ್ಕೆ ನಕಲಿ ಹಿಂದೂ ಧರ್ಮವನ್ನು ಆಮದು ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News