×
Ad

ಜಗನ್ ಮೋಹನ್ ರೆಡ್ಡಿ ಆಡಳಿತದ ಅವಧಿಯಲ್ಲಿ ತಿರುಪತಿಯಲ್ಲಿ 100 ಕೋಟಿ ರೂ. ಕಳ್ಳತನ : ಬಿಜೆಪಿ ನಾಯಕನಿಂದ ಗಂಭೀರ ಆರೋಪ

Update: 2025-09-22 17:16 IST

Screengrab: X/@naralokesh

ಹೊಸದಿಲ್ಲಿ : ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ʼಪರಕಾಮಣಿʼ (ದೇಣಿಗೆ ಪೆಟ್ಟಿಗೆ)ಯಿಂದ 100 ಕೋಟಿ ರೂ.ಗೂ ಹೆಚ್ಚು ಹಣ ಕಳ್ಳತನವಾಗಿದೆ ಎಂದು ಬಿಜೆಪಿ ನಾಯಕರೋರ್ವರು ಆರೋಪಿಸಿದ್ದಾರೆ.

ತಿರುಮಲ ತಿರುಪತಿ ದೇವಸ್ಥಾನದ ಸದಸ್ಯರೂ ಆಗಿರುವ ಭಾನು ಪ್ರಕಾಶ್ ರೆಡ್ಡಿ ದೇವಸ್ಥಾನದ ಸಿಬ್ಬಂದಿ ರವಿಕುಮಾರ್ ದೇಣಿಗೆ ಪೆಟ್ಟಿಗೆಯಿಂದ ಹಣವನ್ನು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತ ಸಿಸಿಟಿವಿ ದೃಶ್ಯಾವಳಿಗಳನ್ನು ಕೂಡ ಬಿಡುಗಡೆ ಮಾಡಿದ್ದಾರೆ.

ದೇವಸ್ಥಾನದಿಂದ ಲೂಟಿ ಮಾಡಿದ ಕೋಟ್ಯಂತರ ರೂಪಾಯಿಗಳನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಲಾಗಿದೆ ಮತ್ತು ಒಂದು ಭಾಗವನ್ನು ಜಗನ್ ಮೋಹನ್ ರೆಡ್ಡಿ ಅವರ ತಡೆಪಲ್ಲಿ ಅರಮನೆಯಲ್ಲಿಡಲಾಗಿದೆ ಎಂದು ಪ್ರಕಾಶ್ ರೆಡ್ಡಿ ಆರೋಪಿಸಿದ್ದಾರೆ. 2019 ರಿಂದ 2024ರವರೆಗಿನ ವೈಎಸ್ಆರ್‌ಸಿಪಿ ಆಡಳಿತದಲ್ಲಿ 100 ಕೋಟಿ ರೂಪಾಯಿ ಕಳ್ಳತನವಾಗಿದೆ. ಇದು ಅತ್ಯಂತ ದೊಡ್ಡ ಲೂಟಿ ಎಂದು ಹೇಳಿದ್ದಾರೆ.

ವೈಎಸ್ಆರ್‌ಸಿಪಿ ಅವಧಿಯಲ್ಲಿ ಭಕ್ತರು ದೇಣಿಗೆ ಪೆಟ್ಟಿಗೆಯಲ್ಲಿ ಹಾಕಿದ ಕಾಣಿಕೆಗಳನ್ನು ಲೂಟಿ ಮಾಡಲಾಗಿದೆ. ಹೈಕೋರ್ಟ್ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿದೆ ಮತ್ತು ಒಂದು ತಿಂಗಳೊಳಗೆ ತನಿಖೆ ನಡೆಸಿ ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಸಲ್ಲಿಸುವಂತೆಯೂ ಆದೇಶಿಸಿದೆ ಎಂದು ಎಂದು ರೆಡ್ಡಿ ಆರೋಪಿಸಿದ್ದಾರೆ.

ಈ ಪ್ರಕರಣವನ್ನು ಈ ಹಿಂದೆ ಲೋಕ ಅದಾಲತ್ ಮೂಲಕ ಇತ್ಯರ್ಥಪಡಿಸಲಾಗಿತ್ತು ಮತ್ತು ಹಲವಾರು ವೈಎಸ್ಆರ್‌ಸಿಪಿ ನಾಯಕರು ಮತ್ತು ಉನ್ನತ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ. ತಿರುಪತಿ ದೇವಸ್ಥಾನದ ಸಂಪತ್ತಿನ ಲೂಟಿಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಭಾಗಿಯಾಗಿದ್ದಾರೆ. ಅಧಿಕಾರಿಗಳು ಮತ್ತು ನಾಯಕರು ಕಳ್ಳತನ ಮಾಡಿರುವ ಹಣವನ್ನು ಹಂಚಿಕೊಂಡಿದ್ದರು. ಹಗರಣದ ನಂತರ ನಿರ್ಣಾಯಕ ಸಾಕ್ಷಿಗಳನ್ನು ನಾಶಪಡಿಸಲಾಗಿದೆ ಎಂದು ಭಾನು ಪ್ರಕಾಶ್ ರೆಡ್ಡಿ ಆರೋಪಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News