×
Ad

ಬಿಹಾರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಪಂಚಾಯತ್ ಸದಸ್ಯರಿಗೆ ಜೀವ ವಿಮೆ, ಪಿಂಚಣಿ:‌ ತೇಜಸ್ವಿ ಯಾದವ್ ಘೋಷಣೆ

Update: 2025-10-26 13:55 IST

ತೇಜಸ್ವಿ ಯಾದವ್ (File Photo: PTI) 

ಪಾಟ್ನಾ: ಒಂದು ವೇಳೆ ಇಂಡಿಯಾ ಮೈತ್ರಿಕೂಟವೇನಾದರೂ ಬಿಹಾರದಲ್ಲಿ ಅಧಿಕಾರಕ್ಕೆ ಬಂದರೆ, ಪಂಚಾಯತಿ ಸದಸ್ಯರಿಗೆ ತಲಾ 50 ಲಕ್ಷ ರೂ. ಜೀವ ವಿಮೆ ಹಾಗೂ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಮಹಾಘಟಬಂಧನ್ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಘೋಷಿಸಿದ್ದಾರೆ.

ಇದರೊಂದಿಗೆ, ಪಂಚಾಯತಿ ಸದಸ್ಯರ ಭತ್ಯೆಗಳನ್ನು ದ್ವಿಗುಣಗೊಳಿಸಲಾಗುವುದು ಎಂದೂ ಅವರು ಭರವಸೆ ನೀಡಿದ್ದಾರೆ.

ಇದಕ್ಕೂ ಮುನ್ನ, ಬಿಹಾರದ ಪ್ರತಿ ಉದ್ಯೋಗರಹಿತ ಕುಟುಂಬಗಳಿಗೆ ತಲಾ ಒಂದು ಸರಕಾರಿ ಉದ್ಯೋಗ ನೀಡುವುದಾಗಿಯೂ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಘೋಷಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News