×
Ad

ರಶ್ಯ ಅಧ್ಯಕ್ಷ ಪುಟಿನ್ ನಿವಾಸದ ಮೇಲೆ ಉಕ್ರೇನ್ ದಾಳಿ ವರದಿ: ಪ್ರಧಾನಿ ಮೋದಿ ತೀವ್ರ ಕಳವಳ

Update: 2025-12-30 19:18 IST

ವ್ಲಾದಿಮಿರ್ ಪುಟಿನ್ , ನರೇಂದ್ರ ಮೋದಿ | Photo Credit : ANI 


ಹೊಸ ದಿಲ್ಲಿ: ರಶ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ನಿವಾಸದ ಮೇಲೆ ಉಕ್ರೇನ್ ದಾಳಿ ನಡೆಸಿದೆ ಎಂಬ ವರದಿಗಳ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಸದ್ಯ ನಡೆಯುತ್ತಿರುವ ಯುದ್ಧವನ್ನು ಅಂತ್ಯಗೊಳಿಸಲು ಉಭಯ ದೇಶಗಳು ರಾಜತಾಂತ್ರಿಕ ಪ್ರಯತ್ನಗಳನ್ನು ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ರಶ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ನಿವಾಸವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂಬ ವರದಿಗಳಿಂದ ನಾನು ತೀವ್ರ ಕಳವಳಕ್ಕೀಡಾಗಿದ್ದೇನೆ. ಹಗೆತನವನ್ನು ಅಂತ್ಯಗೊಳಿಸಲು ಹಾಗೂ ಶಾಂತಿಯನ್ನು ಸ್ಥಾಪಿಸಲು ಸದ್ಯ ನಡೆಯುತ್ತಿರುವ ರಾಜತಾಂತ್ರಿಕ ಪ್ರಯತ್ನಗಳು ಅತ್ಯಂತ ಸೂಕ್ತ ಮಾರ್ಗಗಳಾಗಿವೆ. ಎಲ್ಲಾ ಸಂಬಂಧಿತ ವ್ಯಕ್ತಿಗಳು ಈ ಪ್ರಯತ್ನಗಳತ್ತ ಗಮನವನ್ನು ಕೇಂದ್ರೀಕರಿಸಬೇಕು. ಅದನ್ನು ಕೆಡಿಸುವ ಯಾವುದೇ ಕ್ರಮಗಳನ್ನು ತಪ್ಪಿಸಬೇಕು ಎಂದು ನಾವು ಆಗ್ರಹಿಸುತ್ತೇವೆ” ಎಂದು ಹೇಳಿದ್ದಾರೆ.

ರಶ್ಯ-ಉಕ್ರೇನ್ ನಡುವೆ ಯುದ್ಧ ಪ್ರಾರಂಭಗೊಂಡಾಗಿನಿಂದ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಮಾತುಕತೆಗಳ ನಡೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಲೇ ಬಂದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News