×
Ad

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ: ಪ್ರಕರಣ ದಾಖಲು

Update: 2024-11-08 10:37 IST

ಸಲ್ಮಾನ್ ಖಾನ್ (Photo: PTI)

ಹೊಸದಿಲ್ಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ ಕರೆ ಬಂದಿದ್ದು, ಈ ಕುರಿತು ಮುಂಬೈನ ವರ್ಲಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಳೆದ ರಾತ್ರಿ ಮುಂಬೈ ಟ್ರಾಫಿಕ್ ಕಂಟ್ರೋಲ್ ರೂಮ್ ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ನಿಂದ ನಟ ಸಲ್ಮಾನ್ ಖಾನ್‌ ಗೆ ಬೆದರಿಕೆ ಸಂದೇಶ ಬಂದಿದೆ. ಈ ಬಗ್ಗೆ ವರ್ಲಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.

ನ.5ರಂದು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಸಂದೇಶ ಬಂದಿತ್ತು. ಬೆದರಿಕೆ ಸಂದೇಶದಲ್ಲಿ ಸಲ್ಮಾನ್ ಖಾನ್ ಬಿಷ್ನೋಯ್ ಸಮುದಾಯದ ದೇವಾಲಯಕ್ಕೆ ಬಂದು ಕ್ಷಮೆಯಾಚಿಸಬೇಕು ಅಥವಾ 5 ಕೋಟಿ ರೂ ಪಾವತಿಸಬೇಕು ಎಂದು ಬೆದರಿಕೆ ಹಾಕಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ರಾಜಸ್ಥಾನ ಮೂಲದ ಆರೋಪಿ ಭಿಖಾ ರಾಮ್ ಎಂಬಾತನನ್ನು ಕರ್ನಾಟಕದಲ್ಲಿ ಬಂಧಿಸಲಾಗಿತ್ತು.

Full View


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News