×
Ad

ಸಂಭಲ್ ಹಿಂಸಾಚಾರ | ಸರಕಾರಿ ಉದ್ಯೋಗಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡ ನ್ಯಾಯಾಂಗ ಸಮಿತಿ

Update: 2025-01-30 21:14 IST

Photo Credit: PTI Photo

ಸಂಭಲ್: ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ ಸಂಭಲ್ ನಲ್ಲಿ ಶಾಹಿ ಜಾಮಾ ಮಸೀದಿ ಸಮೀಕ್ಷೆಯ ವೇಳೆ ಸ್ಫೋಟಗೊಂಡಿದ್ದ ಹಿಂಸಾಚಾರದ ಕುರಿತು ತನಿಖೆ ನಡೆಸಲು ಉತ್ತರ ಪ್ರದೇಶ ಸರಕಾರ ನೇಮಿಸಿರುವ ನ್ಯಾಯಾಂಗ ಆಯೋಗದ ಸದಸ್ಯರು ಗುರುವಾರ ಸರಕಾರಿ ಅಧಿಕಾರಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡರು.

ಮಾಜಿ ಹೈಕೋರ್ಟ್ ನ್ಯಾಯಮೂರ್ತಿ ದೇವೇಂದ್ರ ಅರೋರ, ಮಾಜಿ ಪೊಲೀಸ್ ಮಹಾ ನಿರ್ದೇಶಕ ಅರವಿಂದ್ ಕುಮಾರ್ ಜೈನ್ ಹಾಗೂ ಉತ್ತರ ಪ್ರದೇಶದ ಮಾಜಿ ಹೆಚ್ಚುವರಿ ಕಾರ್ಯದರ್ಶಿ ಅಮಿತ್ ಮೋಹನ್ ಪ್ರಸಾದ್ ಅವರನ್ನೊಳಗೊಂಡ ಆಯೋಗವು ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಚಂದೌಸಿ ರಸ್ತೆಯಲ್ಲಿರುವ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದಲ್ಲಿ ಬೀಡು ಬಿಟ್ಟಿತ್ತು ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಗಲಭೆಯಲ್ಲಿ ನಾಲ್ವರು ಮೃತಪಟ್ಟು, ಹಲವಾರು ಪೊಲೀಸರು ಗಾಯಗೊಂಡ ಹಿನ್ನೆಲೆಯಲ್ಲಿ ಈ ಆಯೋಗವನ್ನು ರಚಿಸಲಾಗಿದೆ.

ಅಯೋಗವು ಇದಕ್ಕೂ ಮುನ್ನ ಡಿಸೆಂಬರ್ 1 ಹಾಗೂ ಜನವರಿ 21ರಂದು ಸಂಭಲ್ ಗೆ ಭೇಟಿ ನೀಡಿತ್ತು. ಕಳೆದ ಭೇಟಿಯ ಸಂದರ್ಭದಲ್ಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಆಯೋಗದೆದುರು 51 ದೂರುಗಳು ದಾಖಲಾಗಿದ್ದವು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News