×
Ad

ನನ್ನ ಉಳಿದ ನ್ಯಾಯಾಂಗ ಸೇವೆಗೆ ಸನಾತನ ಧರ್ಮ ಮಾರ್ಗದರ್ಶನ ಮಾಡಬೇಕು: ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶರಿಂದ ವಿವಾದಾತ್ಮಕ ಹೇಳಿಕೆ

Update: 2026-01-26 20:38 IST

ಜಿ.ಆರ್. ಸ್ವಾಮಿನಾಥನ್ | Photo Credit : barandbench.com

ಚೆನ್ನೈ: ಸಾರ್ವಜನಿಕ ಕರ್ತವ್ಯಗಳನ್ನು ನಿರ್ವಹಿಸುವಾಗ ಸನಾತನ ಧರ್ಮ ಹೃದಯದಲ್ಲಿರಬೇಕು ಎಂದು ಶನಿವಾರ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ಜಿ.ಆರ್. ಸ್ವಾಮಿನಾಥನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಚೆನ್ನೈನ ದಾರಾ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನ್ಯಾ. ಜಿ.ಆರ್. ಸ್ವಾಮಿನಾಥನ್, “ಸಾರ್ವಜನಿಕ ಜೀವನದಲ್ಲಿ ವ್ಯಕ್ತಿಯೊಬ್ಬನ ವೃತ್ತಿಪರ ಜ್ಞಾನವೊಂದೇ ಆತನ ಪಾತ್ರ ಅಥವಾ ವ್ಯಕ್ತಿತ್ವವನ್ನು ವ್ಯಾಖ್ಯಾನಿಸಲು ಸಾಧ್ಯವಿಲ್ಲ” ಎಂದು ಅಭಿಪ್ರಾಯಪಟ್ಟರು.

ತಮ್ಮ ಉಳಿದಿರುವ ಸೇವಾವಧಿಯ ಬಗ್ಗೆ ಬೆಳಕು ಚೆಲ್ಲಿದ ಅವರು, “ಈ ಸಂದರ್ಭದಲ್ಲಿ ವೈಯಕ್ತಿಕ ಮೌಲ್ಯಗಳಲ್ಲಿ ಅಡಗಿರುವ ಉತ್ಕೃಷ್ಟತೆಯನ್ನು ಮುಂದುವರಿಸುವ ಜವಾಬ್ದಾರಿಯನ್ನು ನಿರ್ವಹಿಸಲು ಶ್ರಮಿಸುತ್ತೇನೆ” ಎಂದು ಹೇಳಿದರು.

“ಆಶಾದಾಯಕ ಸಂಗತಿಯೆಂದರೆ, ನನಗೆ ಇನ್ನೂ ನಾಲ್ಕೂವರೆ ವರ್ಷಗಳ ಸೇವಾವಧಿ ಇದೆ. ಈ ನಾಲ್ಕೂವರೆ ವರ್ಷಗಳಲ್ಲಿ ನಾನು ಉತ್ಕೃಷ್ಟತೆಯನ್ನು ಪ್ರದರ್ಶಿಸಬೇಕಿದೆ. ಸನಾತನ ಧರ್ಮವನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡು ಕಾರ್ಯನಿರ್ವಹಿಸಬೇಕಿದೆ” ಎಂದು ಅವರು ಪ್ರತಿಪಾದಿಸಿದರು.

ಈ ದಿಕ್ಕಿನಲ್ಲಿ ಮುಂದುವರಿಯಲು ಈ ಕಾರ್ಯಕ್ರಮವೇ ನನಗೆ ಯೋಜನೆ ಮತ್ತು ಜವಾಬ್ದಾರಿ ಎರಡನ್ನೂ ನೀಡಿದೆ ಎಂದೂ ಅವರು ಹೇಳಿದರು.

ಈ ಕಾರ್ಯಕ್ರಮದಲ್ಲಿ ನ್ಯಾ. ಜಿ.ಆರ್. ಸ್ವಾಮಿನಾಥನ್ ಅವರೊಂದಿಗೆ ಭಾಗವಹಿಸಿದ್ದ ಚುನಾವಣಾ ಆಯೋಗದ ಮಾಜಿ ಮುಖ್ಯ ಆಯುಕ್ತ ಎನ್. ಗೋಪಾಲಸ್ವಾಮಿ, ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಕೊಡುಗೆ ನೀಡಿದವರಿಗೆ ಪ್ರಶಸ್ತಿಗಳನ್ನು ವಿತರಿಸಿದರು.

ಸೌಜನ್ಯ: barandbench.com

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News