×
Ad

ಕೇಂದ್ರ ಸರಕಾರಕ್ಕೆ ಧೈರ್ಯವಿದ್ದರೆ ಚೀನಾದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಲಿ: ಸಂಜಯ್ ರಾವುತ್ ಸವಾಲು

Update: 2023-08-29 15:09 IST

Photo: PTI

ಮುಂಬೈ: ಭಾರತದ ಅರುಣಾಚಲ ಪ್ರದೇಶ ರಾಜ್ಯ ಹಾಗೂ ಅಕ್ಸಾಯ್ ಚೆನ್ ಪ್ರದೇಶವನ್ನು ತನ್ನ ಭೂಪ್ರದೇಶದ ಭಾಗವಾಗಿ ತೋರಿಸುವ ಸ್ಟ್ಯಾಂಡರ್ಡ್ ಮ್ಯಾಪ್ ಅನ್ನು ಚೀನಾ ಬಿಡುಗಡೆ ಮಾಡಿದ್ದು, ಈ ಕುರಿತಂತೆ ಪ್ರತಿಕ್ರಿಯಿಸಿರುವ ಶಿವಸೇನೆ(ಯುಬಿಟಿ)ಸಂಸದ ಸಂಜಯ್ ರಾವುತ್, ಲಡಾಖ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ನಿಜವಾಗಿದ್ದು, ಕೇಂದ್ರ ಸರಕಾರಕ್ಕೆ ಧೈರ್ಯವಿದ್ದರೆ ಚೀನಾದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಲಿ ಎಂದು ಮಂಗಳವಾರ ಸವಾಲು ಹಾಕಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾವುತ್, ಲಡಾಖ್ ನ ಪ್ಯಾಂಗಾಂಗ್ ಕಣಿವೆಗೆ ಚೀನಾ ಮಿಲಿಟರಿ ಪ್ರವೇಶಿಸಿದೆ ಎಂಬ ರಾಹುಲ್ ಗಾಂಧಿ ಅವರ ಹೇಳಿಕೆ ನಿಜವಾಗಿದೆ ಎಂದು ಹೇಳಿದರು.

ನಮ್ಮ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಬ್ರಿಕ್ಸ್ ಶ್ರಂಗಸಭೆಯಲ್ಲಿ ಚೀನಾ ಅಧ್ಯಕ್ಷ ಶಿ ಜಿನ್ ಪಿಂಗ್ ಅವರನ್ನು ಭೇಟಿ ಮಾಡಿದ್ದರು. ಶಾಂತಿ ಕಾಪಾಡುವ ಬಗ್ಗೆ ಉಭಯ ದೇಶಗಳು ಒಪ್ಪಿಗೆ ಸೂಚಿಸಿವೆ ಎಂದು ವರದಿಯಾಗಿತ್ತು. ಆದರೆ ಆ ಭೇಟಿಯ ಬಳಿಕವೂ ಚೀನಾ ಈ ನಕ್ಷೆ ಬಿಡುಗಡೆ ಮಾಡಿದೆ. ಚೀನಾ ಅರುಣಾಚಲವನ್ನು ಪ್ರವೇಶಿಸಲು ಯತ್ನಿಸುತ್ತಿದೆ. ನಿಮಗೆ ಧೈರ್ಯವಿದ್ದರೆ ಚೀನಾದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿ ಎಂದು ರಾವುತ್ ಕೇಂದ್ರ ಸರಕಾರವನ್ನು ಒತ್ತಾಯಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News