×
Ad

ಸಂಸ್ಕೃತವನ್ನು ಸಂವಹನ ಮಾಧ್ಯಮವನ್ನಾಗಿ ಬಳಸಬೇಕು: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್

Update: 2025-08-01 16:36 IST

ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ (Photo: PTI)

ಹೊಸದಿಲ್ಲಿ: ಸಂಸ್ಕೃತವು ಎಲ್ಲಾ ಭಾರತೀಯ ಭಾಷೆಗಳ ಮೂಲವಾಗಿದೆ ಮತ್ತು ಅದನ್ನು ಸಂವಹನ ಮಾಧ್ಯಮವನ್ನಾಗಿ ಮಾಡುವ ಅವಶ್ಯಕತೆಯಿದೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಕವಿ ಕುಲಗುರು ಕಾಳಿದಾಸ ಸಂಸ್ಕೃತ ವಿಶ್ವವಿದ್ಯಾಲಯದ ಕಟ್ಟಲಡ ಉದ್ಘಾಟನೆ ವೇಳೆ ಮಾತನಾಡಿದ ಭಾಗವತ್, ಸಂಸ್ಕೃತವನ್ನು ಅರ್ಥಮಾಡಿಕೊಳ್ಳುವುದಕ್ಕೂ ಆ ಭಾಷೆಯಲ್ಲಿ ಮಾತನಾಡಲು ಸಾಧ್ಯವಾಗುವುದಕ್ಕೂ ವ್ಯತ್ಯಾಸವಿದೆ. ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ಸರಕಾರದಿಂದ ಪ್ರೋತ್ಸಾಹ ಸಿಗುತ್ತದೆ, ಆದರೆ ಜನರ ಪ್ರೋತ್ಸಾಹವೂ ಅಗತ್ಯ ಎಂದು ಹೇಳಿದರು.

ʼಸಂಸ್ಕೃತ ಪ್ರತಿಯೊಂದು ಮನೆಯನ್ನು ತಲುಪಬೇಕು ಮತ್ತು ಸಂಸ್ಕೃತ ಭಾಷೆಯಲ್ಲಿ ಮಾತನಾಡುವ ಅಗತ್ಯವಿದೆ. ಸಂಸ್ಕೃತವನ್ನು ತಿಳಿದುಕೊಳ್ಳುವುದು ದೇಶವನ್ನು ಅರ್ಥಮಾಡಿಕೊಂಡಂತೆʼ ಎಂದು ಮೋಹನ್ ಭಾಗವತ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News