×
Ad

ಸತ್ಯೇಂದ್ರ ಜೈನ್ ಮಧ್ಯಂತರ ಜಾಮೀನು ಜುಲೈ 24ರ ವರೆಗೆ ವಿಸ್ತರಣೆ

Update: 2023-07-10 23:04 IST

 Photo: PTI 

ಹೊಸದಿಲ್ಲಿ: ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದಿಲ್ಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ಗೆ ವೈದ್ಯಕೀಯ ನೆಲೆಯಲ್ಲಿ ನೀಡಿದ್ದ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಸೋಮವಾರ ಜುಲೈ 24ರ ವರೆಗೆ ವಿಸ್ತರಿಸಿದೆ.

ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಹಾಗೂ ಎಂ.ಎಂ. ಸುಂದರೇಶ್ ಅವರನ್ನು ಒಳಗೊಂಡ ಪೀಠ, ವೈದ್ಯಕೀಯ ವರದಿಯನ್ನು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು ಅವರಿಗೆ ನೀಡುವಂತೆ ಸತ್ಯೇಂದ್ರ ಜೈನ್ ಪರವಾಗಿ ಹಾಜರಾಗಿದ್ದ ಹಿರಿಯ ನ್ಯಾಯವಾದಿ ಅಭಿಷೇಕ್ ಸಿಂಘ್ವಿ ಅವರಿಗೆ ನಿರ್ದೇಶಿಸಿತು.

ಸಂಕ್ಷಿಪ್ತ ವಿಚಾರಣೆಯ ಸಂದರ್ಭ ಸಿಂಘ್ವಿ ಅವರು, ಜೈನ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಸುವಂತೆ ಮೂರು ಆಸ್ಪತ್ರೆಗಳು ಶಿಫಾರಸು ಮಾಡಿವೆ ಎಂದು ಪ್ರತಿಪಾದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News