×
Ad

ಚುನಾವಣೆ ಪ್ರಚಾರದ ವೇಳೆ ಶರದ್ ಪವಾರ್ ಫೋಟೋ, ವೀಡಿಯೊ ಬಳಸದಂತೆ ಅಜಿತ್ ಪವಾರ್ ಬಣಕ್ಕೆ ಸುಪ್ರೀಂ ಕೋರ್ಟ್ ಸೂಚನೆ

Update: 2024-11-13 16:11 IST

ಅಜಿತ್ ಪವಾರ್ (Photo: PTI)

ಹೊಸದಿಲ್ಲಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಶರದ್ ಪವಾರ್ ಅವರ ಫೋಟೋ ಮತ್ತು ವೀಡಿಯೊಗಳನ್ನು ಬಳಸದಂತೆ ಅಜಿತ್ ಪವಾರ್ ಬಣಕ್ಕೆ ಸುಪ್ರೀಂಕೋರ್ಟ್ ಮೌಖಿಕವಾಗಿ ಸೂಚಿಸಿದೆ.

ನಿಮ್ಮ ಸ್ವಂತ ಕಾಲಿನ ಮೇಲೆ ನಿಂತುಕೊಂಡು ಪ್ರತ್ಯೇಕ ಗುರುತಿನ ಆಧಾರದ ಮೇಲೆ ಚುನಾವಣೆಯಲ್ಲಿ ಹೋರಾಡಬೇಕು. ಶರದ್ ಪವಾರ್ ಅವರ ಫೋಟೋ ಮತ್ತು ವೀಡಿಯೊಗಳನ್ನು ಬಳಸದಂತೆ ಪಕ್ಷದ ಕಾರ್ಯಕರ್ತರಿಗೆ ಸೂಚಿಸಬೇಕು ಎಂದು ಅಜಿತ್ ಪವಾರ್ ನೇತೃತ್ವದ ಎನ್‌ ಸಿಪಿಗೆ ಸುಪ್ರೀಂ ಕೋರ್ಟ್‌ ಹೇಳಿದೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಅಜಿತ್ ಪವಾರ್ ಬಣ ಗಡಿಯಾರದ ಚಿಹ್ನೆಯನ್ನು ಬಳಸದಂತೆ ತಡೆಯುವಂತೆ ಕೋರಿ ಶರದ್ ಪವಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸುತ್ತಿದೆ.

ಶರದ್ ಪವಾರ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಸುಪ್ರೀಂ ಕೋರ್ಟ್‌ನ ಆದೇಶವನ್ನು ಉಲ್ಲಂಘಿಸಿ ಅಜಿತ್ ಪವಾರ್ ಬಣ, ಶರದ್ ಪವಾರ್ ಅವರ ಫೋಟೋ, ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿರುವುದನ್ನು ಕೋರ್ಟ್‌ ಮುಂದಿಟ್ಟಿದ್ದಾರೆ. ಇದಲ್ಲದೆ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಅಭ್ಯರ್ಥಿ ಅಮೋಲ್ ಮಿಟ್ಕರಿ ಶರದ್ ಪವಾರ್ ಅವರ ಫೋಟೋಗಳನ್ನು ಚುನಾವಣಾ ಪ್ರಚಾರದ ವೇಳೆ ಬಳಸಿದ್ದಾರೆಂದು ಕೋರ್ಟ್‌ ಗಮನಕ್ಕೆ ತಂದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News