×
Ad

ರಿಲಯನ್ಸ್ ಫೌಂಡೇಶನ್‌ನ 'ವಂತಾರಾ' ಪ್ರಾಣಿ ಸಂರಕ್ಷಣಾ ಕೇಂದ್ರದ ಕುರಿತು ಎಸ್ಐಟಿ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

Update: 2025-08-26 11:09 IST

Photo credit: PTI

ಹೊಸದಿಲ್ಲಿ: ರಿಲಯನ್ಸ್ ಫೌಂಡೇಶನ್ ನಡೆಸುತ್ತಿರುವ ಗುಜರಾತ್‌ನ ಜಾಮ್‌ನಗರದಲ್ಲಿರುವ ʼವಂತಾರಾʼ ಪ್ರಾಣಿಗಳ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರದ ವ್ಯವಹಾರಗಳ ಕುರಿತ ತನಿಖೆಗೆ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ಚೆಲಮೇಶ್ವರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಆದೇಶಿಸಿದೆ.

ಸಿಆರ್ ಜಯಾ ಸುಕಿನ್ ಎಂಬ ವಕೀಲರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಂಕಜ್ ಮಿಥಲ್ ಮತ್ತು ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ಈ ಆದೇಶವನ್ನು ಹೊರಡಿಸಿದೆ.

ಉತ್ತರಾಖಂಡ ಮತ್ತು ತೆಲಂಗಾಣ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ರಾಘವೇಂದ್ರ ಚೌಹಾಣ್, ಮುಂಬೈನ ಮಾಜಿ ಪೊಲೀಸ್ ಆಯುಕ್ತರಾದ ಹೇಮಂತ್ ನಾಗ್ರಾಲೆ, ಕಸ್ಟಮ್ಸ್ ಹೆಚ್ಚುವರಿ ಆಯುಕ್ತರಾದ ಅನೀಶ್ ಗುಪ್ತಾ ಅವರನ್ನು ಎಸ್ಐಟಿಗೆ ಸುಪ್ರೀಂ ಕೋರ್ಟ್ ನೇಮಿಸಿದೆ.

"ಭಾರತ ಮತ್ತು ವಿದೇಶಗಳಿಂದ ಪ್ರಾಣಿಗಳನ್ನು, ವಿಶೇಷವಾಗಿ ಆನೆಗಳನ್ನು ತರಿಸುವ ವೇಳೆ ವನ್ಯಜೀವಿ ಸಂರಕ್ಷಣಾ ಕಾಯ್ದೆ ಮತ್ತು ಇತರ ಸಂಬಂಧಿತ ಕಾನೂನುಗಳ ನಿಬಂಧನೆಗಳ ಅನುಸರಣೆ ಬಗ್ಗೆ ತನಿಖೆ ನಡೆಸಬೇಕು” ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News