×
Ad

ದಿಲ್ಲಿ ಲೋಕಸಭಾ ಸೀಟು ಹಂಚಿಕೆ ಒಪ್ಪಂದ ಅಂತಿಮ: ಆಪ್ 4 ಹಾಗೂ ಕಾಂಗ್ರೆಸ್ 3 ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ; ವರದಿ

Update: 2024-02-22 13:07 IST

ಸಾಂದರ್ಭಿಕ ಚಿತ್ರ (Photo: PTI)

ಹೊಸದಿಲ್ಲಿ: ದಿಲ್ಲಿ ಲೋಕಸಭಾ ಸೀಟು ಹಂಚಿಕೆ ಸಂಬಂಧ ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ನಡುವೆ ಒಪ್ಪಂದ ಅಂತಿಮಗೊಂಡಿದ್ದು, ಆಮ್ ಆದ್ಮಿ ಪಕ್ಷ ನಾಲ್ಕು ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದರೆ, ಕಾಂಗ್ರೆಸ್ ಪಕ್ಷವು ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು indianexpress.com ವರದಿ ಮಾಡಿದೆ.

ಹಲವಾರು ಸುತ್ತಿನ ಮಾತುಕತೆಯ ನಂತರ ಗುರುವಾರ ಈ ಸಂಬಂಧ ಒಪ್ಪಂದಕ್ಕೆ ಬರಲಾಗಿದೆ ಎಂದು ಮೂಲಗಳು ತಿಳಿಸಿವೆ. 4-3 ಸೀಟು ಹಂಚಿಕೆ ಸೂತ್ರವನ್ನು ಒಪ್ಪಿಕೊಳ್ಳಲಾಗಿದೆ ಎಂದು ಎರಡೂ ಪಕ್ಷಗಳು ದೃಢಪಡಿಸಿವೆ.

ಕಾಂಗ್ರೆಸ್ ಮೂಲಗಳ ಪ್ರಕಾರ, ಕಾಂಗ್ರೆಸ್ ಪಕ್ಷವು ಪೂರ್ವ ಹಾಗೂ ವಾಯುವ್ಯ ದಿಲ್ಲಿ ಲೋಕಸಭಾ ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದು, ಮೂರನೆ ಲೋಕಸಭಾ ಕ್ಷೇತ್ರದ ಆಯ್ಕೆಯನ್ನು ತನಗೇ ಬಿಡಲಾಗಿದೆ ಎಂದು ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News