ಮಹಾರಾಷ್ಟ್ರ: ಸರಕಾರಿ ಆಸ್ಪತ್ರೆಯಲ್ಲಿ ಮತ್ತೆ 4 ಮಕ್ಕಳ ಸಹಿತ 7 ಮಂದಿ ಮೃತ್ಯು; 48 ಗಂಟೆಗಳಲ್ಲಿ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆ
Update: 2023-10-03 10:43 IST
Photo credit: NDTV
ಹೊಸದಿಲ್ಲಿ: ಮಹಾರಾಷ್ಟ್ರ ನಾಂದೇಡ್ನ ಸರಕಾರಿ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಗಳಲ್ಲಿ 12 ನವಜಾತ ಶಿಶುಗಳು ಹಾಗೂ 12 ರೋಗಿಗಳು ಮೃತಪಟ್ಟ ಘಟನೆ ವರದಿಯಾದ ಬೆನ್ನಲ್ಲೇ ಮತ್ತೆ ನಾಲ್ಕು ಮಕ್ಕಳು ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದು ಕಳೆದ 48 ಗಂಟೆಗಳಲ್ಲಿ ಮೃತಪಟ್ಟವರ ಸಂಖ್ಯೆ 31 ಕ್ಕೇರಿದೆ ಎಂದು NDTV ವರದಿ ಮಾಡಿದೆ.