ತೆಲಂಗಾಣ: ಇಂಟರ್‍ಮೀಡಿಯೇಟ್ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಏಳು ವಿದ್ಯಾರ್ಥಿಗಳು ಆತ್ಮಹತ್ಯೆ

Update: 2024-04-26 11:25 GMT

ಹೈದರಾಬಾದ್: ತೆಲಂಗಾಣದಲ್ಲಿ ಇಂಟರ್‍ಮೀಡಿಯೇಟ್ ಪರೀಕ್ಷೆ ಫಲಿತಾಂಶ ಪ್ರಕಟವಾದ 48 ಗಂಟೆಗಳಲ್ಲಿ, ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಏಳು ಮಂದಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತೆಲಂಗಾಣ ಇಂಟರ್‍ಮೀಡಿಯೇಟ್ ಎಕ್ಸಾಮಿನೇಷನ್ ಬೋರ್ಡ್ ಮೊದಲ ವರ್ಷದ ಹಾಗೂ ಎರಡನೇ ವರ್ಷದ ಫಲಿತಾಂಶವನ್ನು ಎಪ್ರಿಲ್ 24ರಂದು ಪ್ರಕಟಿಸಿತ್ತು.

ಮೆಹಬೂಬಾಬಾದ್ ಎಸ್ಪಿಯವರ ಪ್ರಕಾರ, ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಇಬ್ಬರು ಬಾಲಕಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಬ್ಬ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡರೆ ಮತ್ತೊಬ್ಬಳು ಬಾವಿಗೆ ಹಾರಿ ಜೀವ ಕಳೆದುಕೊಂಡಿದ್ದಾಳೆ.

ಅಂತೆಯೇ ಸುಲ್ತಾನ್‍ಬಜಾರ್ ಠಾಣೆ ವ್ಯಾಪ್ತಿಯಲ್ಲಿ ಮೊದಲ ವರ್ಷದ ವಿದ್ಯಾರ್ಥಿ ಪರೀಕ್ಷೆಯಲ್ಲಿ ಅನುತ್ತೀರ್ಣನಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಡಿಸಿಪಿ ಆರ್. ಗಿರಿಧರ್ ಹೇಳಿದ್ದಾರೆ.

ನಗರದ ನಲ್ಲಕುಂಟಾದಲ್ಲಿ ವಿದ್ಯಾರ್ಥಿಯೊಬ್ಬನ ಶವ ಜಡಚೇರ್ಲಾ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಪರೀಕ್ಷೆಯಲ್ಲಿ ಕಳಪೆ ಸಾಧನೆಯೇ ಈ ವಿದ್ಯಾರ್ಥಿಗಳ ಆತ್ಮಹತ್ಯೆಗೆ ಕಾರಣ ಎನ್ನುವುದು ಪೊಲೀಸರ ಶಂಕೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News