×
Ad

ಸುಶೀಲಾ ಕರ್ಕಿ ಮಹಿಳಾ ಸಬಲೀಕರಣಕ್ಕೆ ಉದಾಹರಣೆ : ನೇಪಾಳದ ನೂತನ ಪ್ರಧಾನಿಗೆ ಮೋದಿ ಅಭಿನಂದನೆ

Update: 2025-09-13 18:25 IST

Photo |indiatoday

ಹೊಸದಿಲ್ಲಿ: ನೇಪಾಳದ ನೂತನ ಪ್ರಧಾನಿ ಸುಶೀಲಾ ಕರ್ಕಿ ಮಹಿಳಾ ಸಬಲೀಕರಣಕ್ಕೆ ಉಜ್ವಲ ಉದಾಹರಣೆಯಾಗಿದ್ದಾರೆ. ದೇಶದಲ್ಲಿ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ದಾರಿ ಮಾಡಿಕೊಡುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮಣಿಪುರ ರಾಜಧಾನಿ ಇಂಫಾಲ್‌ನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಸುಶೀಲಾ ಕರ್ಕಿ ಅವರನ್ನು ಅಭಿನಂದಿಸಿದ್ದಾರೆ. ಸುಶೀಲಾ ಕರ್ಕಿ ಮಹಿಳಾ ಸಬಲೀಕರಣಕ್ಕೆ ಒಂದು ಉಜ್ವಲ ಉದಾಹರಣೆ. 140 ಕೋಟಿ ಭಾರತೀಯರ ಪರವಾಗಿ ನಾನು ಕರ್ಕಿ ಅವರನ್ನು ಅಭಿನಂದಿಸಲು ಬಯಸುತ್ತೇನೆ ಎಂದು ಹೇಳಿದರು.

ನೇಪಾಳದಲ್ಲಿ ಹಿಂಸಾತ್ಮಕ ಪ್ರತಿಭಟನೆ ಬಳಿಕ ನೇಪಾಳ ಸರಕಾರದ ಮಧ್ಯಂತರ ಪ್ರಧಾನಿಯಾಗಿ ಸುಶೀಲಾ ಕರ್ಕಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News