×
Ad

ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ: ಇಬ್ಬರು ಆರೋಪಿಗಳ ಬಂಧನ

Update: 2024-04-16 10:58 IST

PC : NDTV 

ಮುಂಬೈ/ಭುಜ್: ಬಾಲಿವುಡ್ ನಟ ಸಲ್ಮಾನ್ ಖಾನ್ ರ ಮುಂಬೈ ನಿವಾಸದ ಹೊರಗೆ ಗುಂಡಿನ ದಾಳಿ ನಡೆಸಿದ್ದ ಆರೋಪಿಯೂ ಸೇರಿದಂತೆ ಇಬ್ಬರು ವ್ಯಕ್ತಿಗಳನ್ನು ಗುಜರಾತ್ ನಲ್ಲಿ ಬಂಧಿಸಲಾಗಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬಿಹಾರದ ನಿವಾಸಿಗಳಾದ ವಿಕ್ಕಿ ಗುಪ್ತಾ (24) ಹಾಗೂ ಸಾಗರ್ ಪಾಲ್ (21) ಎಂದು ಗುರುತಿಸಲಾಗಿದ್ದು, ಅವರನ್ನು ಗುಜರಾತ್ ನ ಕುಛ್ ಜಿಲ್ಲೆಯ ಮಾತಾ ನೊ ಮಧ್ ಗ್ರಾಮದಿಂದ ಬಂಧಿಸಲಾಗಿದೆ ಎಂದು ಪಶ್ಚಿಮ ಕುಛ್ ವಲಯದ ಉಪ ಪೊಲೀಸ್ ಮಹಾ ನಿರೀಕ್ಷಕ ಮಹೇಂದ್ರ ಬಗಾದಿಯ ತಿಳಿಸಿದ್ದಾರೆ.

ತಾಂತ್ರಿಕ ನಿಗಾವಣೆಯ ಮೂಲಕ ಪಶ್ಚಿಮ ಕುಛ್ ಹಾಗೂ ಮುಂಬೈ ಪೊಲೀಸರ ಜಂಟಿ ತಂಡವು ಆರೋಪಿಗಳನ್ನು ಸೆರೆ ಹಿಡಿದಿದೆ ಎಂದು ಅವರು ಹೇಳಿದ್ದಾರೆ.

ಮುಂಬೈನಲ್ಲಿ ದೂರು ದಾಖಲಾಗಿರುವುದರಿಂದ, ಅವರನ್ನು ಮುಂಬೈ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ ಎಂದು ಬಗಾದಿಯಾ ತಿಳಿಸಿದ್ದಾರೆ.

ಸಲ್ಮಾನ್ ಖಾನ್ ನಿವಾಸದೆದುರು ಗುಂಡಿನ ದಾಳಿ ನಡೆಸಲು ಇಬ್ಬರು ಬಂದೂಕುಧಾರಿಗಳಾದ ಪಾಲ್ ಹಾಗೂ ಗುಪ್ತಾನನ್ನು ಕುಖ್ಯಾತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ನಿಯೋಜಿಸಿದ್ದ ಎಂಬುದು ಪ್ರಾಥಮಿಕ ತನಿಖೆಯ ವೇಳೆ ತಿಳಿದು ಬಂದಿದೆ ಎಂದು ಅವರು ಹೇಳಿದ್ದಾರೆ.

ಪಾಲ್ ಗುಂಡಿನ ದಾಳಿ ನಡೆಸುವಾಗ, ಗುಪ್ತಾ ಗ್ಯಾಂಗ್ ಸ್ಟರ್ ಗುಂಪಿನ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದ ಎಂದು ಬಗಾದಿಯಾ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News