ಬಿಹಾರ | ವೋಟರ್ ಅಧಿಕಾರ ಯಾತ್ರಾದಲ್ಲಿ ಪಾಲ್ಗೊಳ್ಳಲಿರುವ ಸಿದ್ದರಾಮಯ್ಯ, ಪ್ರಿಯಾಂಕಾ ಗಾಂಧಿ
Update: 2025-08-24 21:29 IST
ರಾಹುಲ್ ಗಾಂಧಿ , ಸಿದ್ದರಾಮಯ್ಯ , ಪ್ರಿಯಾಂಕಾ ಗಾಂಧಿ | PC : X
ಪಾಟ್ನಾ,ಆ.24: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಆಗಸ್ಟ್ 26 ಹಾಗೂ 27ರಂದು ಬಿಹಾರದ ಸುಪೌಲ್ ಹಾಗೂ ಮಧುಬನಿ ಜಿಲ್ಲೆಗಳಲ್ಲಿ ನಡೆಯಲಿರುವ ‘ಮತದಾರ್ ಅಧಿಕಾರ್ ಯಾತ್ರಾ’ದಲ್ಲಿ ಭಾಗವಹಿಸಲಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ. 29ರಂದು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಯಾತ್ರೆಯ ಸಂದರ್ಭದಲ್ಲಿ ಪ್ರಿಯಾಂಕಾ ಅವರೊಂದಿಗೆ ರಾಹುಲ್ ಗಾಂಧಿ ಹಾಗೂ ಇತರ ಪ್ರತಿಪಕ್ಷ ನಾಯಕರು ಭಾಗವಹಿಸಲಿದ್ದಾರೆಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ. ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಆಗಸ್ಟ್ 27ರಂದು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ಕೂಡಾ ಭಾಗವಹಿಸುವ ಸಾಧ್ಯತೆಯಿದೆ.