×
Ad

ಸಿಕ್ಕಿಂ | ಸೇನಾ ಶಿಬಿರದ ಮೇಲೆ ಭೂಕುಸಿತ: 3 ಸೇನಾ ಸಿಬ್ಬಂದಿ ಮೃತ್ಯು

Update: 2025-06-02 18:29 IST

PC : X 

ಗ್ಯಾಂಗ್ಟಾಕ್: ಸಿಕ್ಕಿಂನ ಛಾಟೆನ್ ಬಳಿಯ ಸೇನಾ ಶಿಬಿರದ ಬಳಿ ಸಂಭವಿಸಿದ ಭೂಕುಸಿತದಲ್ಲಿ 3 ಸೇನಾ ಸಿಬ್ಬಂದಿ ಮೃತಪಟ್ಟಿದ್ದು, 6 ಸೈನಿಕರು ನಾಪತ್ತೆಯಾಗಿದ್ದಾರೆ‌ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ರವಿವಾರ ಸಂಜೆ 7 ಗಂಟೆಯ ವೇಳೆ ಭೂ ಕುಸಿತ ಸಂಭವಿಸಿದೆ ಎನ್ನಲಾಗಿದೆ. ಭೂಕುಸಿತ ಸಂಭವಿಸಿದ ಜಾಗದಲ್ಲಿ ರಕ್ಷಣಾ ಕಾರ್ಯಾಚರಣೆ ಮಾಡಲಾಗಿದೆ. ಸ್ಥಳದಲ್ಲಿ 3 ಮೃತದೇಹಗಳು ಪತ್ತೆಯಾಗಿದೆ ಎಂದು ರಕ್ಷಣಾ ಇಲಾಖೆಯ ಮೂಲಗಳ ತಿಳಿಸಿವೆ.

ಭೂ ಕುಸಿತ ಸಂಭವಿಸಿ ಮೃತಪಟ್ಟವರನ್ನು ಹವಾಲ್ದಾರ್ ಲಖ್ವಿಂದರ್ ಸಿಂಗ್, ಲ್ಯಾನ್ಸ್ ನಾಯಕ್ ಮುನೀಶ್ ಠಾಕೂರ್ ಮತ್ತು ಪೋರ್ಟರ್ ಅಭಿಷೇಕ್ ಲಖಾಡ ಎಂದು ಗುರುತಿಸಲಾಗಿದೆ.‌ ಕೆಲವು ಸೈನಿಕರಿಗೆ ಗಾಯಗಳಾಗಿವೆ. ಘಟನೆ ನಡೆದ ಸ್ಥಳದಲ್ಲಿ 6 ಸೈನಿಕರು ನಾಪತ್ತೆಯಾಗಿದ್ದು, ಅವರನ್ನು ಪತ್ತೆಹಚ್ಚುವ ಕಾರ್ಯಾಚಣೆ ಪ್ರಗತಿಯಲ್ಲಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News