×
Ad

ಪೆಹಲ್ಗಾಮ್ ದಾಳಿಯ ಕುರಿತ ಪೋಸ್ಟ್ ಪ್ರಕರಣ: ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ರಕ್ಷಣೆ

Update: 2026-01-07 22:10 IST

ನೇಹಾ ಸಿಂಗ್ ರಾಥೋಡ್‌(@nehafolksinger) , ಸುಪ್ರೀಂ ಕೋರ್ಟ್(PTI)


ಹೊಸದಿಲ್ಲಿ: ಜಮ್ಮು ಹಾಗೂ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮದ ಪೋಸ್ಟ್‌ಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಭೋಜ್‌ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ಸುಪ್ರೀಂ ಕೋರ್ಟ್ ಬುಧವಾರ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದೆ.

ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಹಾಗೂ ಅತುಲ್ ಎಸ್. ಚಂದ್ರಾಕರ್ ಅವರ ಪೀಠ, ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನಿರಾಕರಿಸಿದ ಅಲಹಾಬಾದ್ ಉಚ್ಚ ನ್ಯಾಯಾಲಯದ ಆದೇಶ ಪ್ರಶ್ನಿಸಿ ನೇಹಾ ಸಿಂಗ್ ರಾಥೋಡ್ ಸಲ್ಲಿಸಿದ ಅರ್ಜಿಯ ಹಿನ್ನೆಲೆಯಲ್ಲಿ ನೋಟಿಸನ್ನು ಕೂಡ ಜಾರಿ ಮಾಡಿದೆ.

ಆದರೆ, ರಾಥೋಡ್ ಅವರು ತನಿಖಾಧಿಕಾರಿಗಳು ಕರೆದಾಗ ಅವರ ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದು ನ್ಯಾಯಾಲಯ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News