ಶಿಕ್ಷಣ ಸಂಸ್ಥೆಗಳಲ್ಲಿ ‘ವಂದೇಮಾತರಂ’ ಗೀತೆಯ ಗಾಯನವನ್ನು ಕಡ್ಡಾಯ ಮಾಡಲಾಗುವುದು: ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್
Update: 2025-11-10 13:33 IST
ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ (Photo: PTI)
ಗೋರಖ್ ಪುರ್: ಉತ್ತರ ಪ್ರದೇಶದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ‘ವಂದೇಮಾತರಂ’ ಗೀತೆಯ ಗಾಯನವನ್ನು ಕಡ್ಡಾಯಗೊಳಿಸಲಾಗುವುದು ಎಂದು ಸೋಮವಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಘೋಷಿಸಿದ್ದಾರೆ.
ಗೋರಖ್ ಪುರ್ ನಲ್ಲಿ ಆಯೋಜನೆಗೊಂಡಿದ್ದ ಏಕತಾ ಯಾತ್ರೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಆದಿತ್ಯನಾಥ್, “ಈ ನಡೆಯು ಭಾರತ ಮಾತೆ ಮತ್ತು ಮಾತೃಭೂಮಿಯ ಬಗ್ಗೆ ನಾಗರಿಕರಲ್ಲಿ ಗೌರವ ಮತ್ತು ಹೆಮ್ಮೆಯ ಭಾವನೆಗಳನ್ನು ಹುಟ್ಟು ಹಾಕಲಿದೆ” ಎಂದು ಹೇಳಿದ್ದಾರೆ.
“ರಾಷ್ಟ್ರೀಯ ಹಾಡು ವಂದೇ ಮಾತರಂ ಬಗ್ಗೆ ಗೌರವ ಭಾವನೆ ಹೊಂದಿರಬೇಕು. ಹೀಗಾಗಿ, ಉತ್ತರ ಪ್ರದೇಶದ ಪ್ರತಿಯೊಂದು ಶಾಲೆ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಗೀತೆಯ ಗಾಯನವನ್ನು ಕಡ್ಡಾಯಗೊಳಿಸಲಾಗುವುದು” ಎಂದು ಅವರು ತಿಳಿಸಿದ್ದಾರೆ.