ಗುಜರಾತ್ | ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ವಡೋದರದಲ್ಲಿ ಹಿಂಸಾಚಾರ
ಸಾಂದರ್ಭಿಕ ಚಿತ್ರ
ವಡೋದರ: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಸಂಬಂಧ ಶುಕ್ರವಾರ ತಡರಾತ್ರಿ ನಡೆದಿದ್ದ ಗಲಭೆಗೆ ಸಂಬಂಧಿಸಿದಂತೆ ಗುಜರಾತ್ ನ ವಡೋದರ ನಗರದಲ್ಲಿ ಸುಮಾರು 50 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ತಡರಾತ್ರಿ ಸ್ಫೋಟಗೊಂಡ ಗಲಭೆಯಲ್ಲಿ ನಡೆದಿದ್ದ ಕಲ್ಲು ತೂರಾಟದಲ್ಲಿ ಪೊಲೀಸ್ ಸಿಬ್ಬಂದಿಗಳೂ ಸೇರಿದಂತೆ ಕೆಲವರು ಗಾಯಗೊಂಡಿದ್ದರು. ಆದರೆ, ಪರಿಸ್ಥಿತಿಯನ್ನು ಶೀಘ್ರವೇ ನಿಯಂತ್ರಣಕ್ಕೆ ಬಂತು ಎಂದು ಅವರು ಹೇಳಿದ್ದಾರೆ.
ಶುಕ್ರವಾರ ರಾತ್ರಿ ಪೊಲೀಸ್ ಠಾಣೆಯೆದುರು ಜಮಾಯಿಸಿದ ಮುಸ್ಲಿಂ ಸಮುದಾಯದ ಸದಸ್ಯರು, ಸಾಮಾಜಿಕ ಮಾಧ್ಯಮ ಪೋಸ್ಟ್ ಒಂದರಿಂದ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದ್ದು, ಈ ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆದರೆ, ಮತ್ತೊಂದು ಅಲ್ಪಸಂಖ್ಯಾತ ಸಮುದಾಯದ ಗುಂಪಿನ ಸುಮಾರು 500ರಿಂದ 600 ಮಂದಿಯ ಸದಸ್ಯರು ಕಲ್ಲು ತೂರಾಟದಲ್ಲಿ ತೊಡಗಿದರು ಹಾಗೂ ಹಳೆ ನಗರದ ಜುನಿಗಢೀ ಪ್ರದೇಶದಲ್ಲಿನ ವಾಹನಗಳನ್ನು ಜಖಂಗೊಳಿಸಿದರು ಎಂದು ವಡೋದರ ನಗರ ಉಪ ಪೊಲೀಸ್ ಆಯುಕ್ತ (4ನೇ ವಲಯ) ಆ್ಯಂಡ್ರ್ಯೂ ಮ್ಯಾಕ್ವಾನ್ ಹೇಳಿದ್ದಾರೆ.
ಈ ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗಳು ಸೇರಿದಂತೆ ಕೆಲವರು ಗಾಯಗೊಂಡರು ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಎರಡು ಪ್ರತ್ಯೇಕ ಎಫ್ಐಆರ್ ಗಳು ದಾಖಲಾಗಿದ್ದು, ಸಾಮಾಜಿಕ ಮಾಧ್ಯಮ ಪೋಸ್ಟ್ ಮಾಡಿದ್ದ ವ್ಯಕ್ತಿಯ ವಿರುದ್ಧ ಒಂದು ಹಾಗೂ ಹಿಂಸಾಚಾರದಲ್ಲಿ ಭಾಗಿಯಾದ ಜನರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ.