ʼಆಪರೇಷನ್ ಸಿಂಧೂರ್ʼ ಕುರಿತ ಪೋಸ್ಟ್| ಬಂಧನ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋದ ಅಶೋಕ ವಿವಿ ಪ್ರಾಧ್ಯಾಪಕ
Photo credit: PTI
ಹೊಸದಿಲ್ಲಿ: ʼಆಪರೇಷನ್ ಸಿಂಧೂರ್ʼ ಕುರಿತ ಸಾಮಾಜಿಕ ಮಾಧ್ಯಮದಲ್ಲಿನ ಪೋಸ್ಟ್ ಗಾಗಿ ಬಂಧನಕ್ಕೊಳಗಾದ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ತಮ್ಮ ಬಂಧನ ಮಾಡಿರುವುದನ್ನು ಪ್ರಶ್ನಿಸಿ ಅಲಿ ಖಾನ್ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ಇಂದು ಅಥವಾ ನಾಳೆ ವಿಚಾರಣೆ ನಡೆಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ʼಆಪರೇಷನ್ ಸಿಂಧೂರʼ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಅಲಿ ಖಾನ್ ರನ್ನು ರವಿವಾರ ಪೊಲೀಸರು ಬಂಧಿಸಿದ್ದಾರೆ.
ಹರ್ಯಾಣದ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯೋಗೇಶ್ ಜಥೇರಿ ನೀಡಿದ ದೂರಿನ ಮೇರೆಗೆ ಸೋನೆಪತ್ ಜಿಲ್ಲೆಯ ರಾಯ್ ಪೊಲೀಸ್ ಠಾಣೆಯಲ್ಲಿ ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಅಲಿ ಖಾನ್ ಅವರ ಬಂಧನಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ಆಡಳಿತಾರೂಢ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿವೆ. ಕರ್ನಲ್ ಸೋಫಿಯಾ ಖುರೇಷಿ ಅವರ ಬಗ್ಗೆ ಹೇಳಿಕೆ ನೀಡಿದ ಮಧ್ಯಪ್ರದೇಶ ಸಚಿವ ವಿಜಯ್ ಶಾ ಅವರನ್ನು ಇನ್ನೂ ಏಕೆ ಬಂಧಿಸಿಲ್ಲ ಎಂದು ಅವು ಪ್ರಶ್ನಿಸಿವೆ.