×
Ad

ದಕ್ಷಿಣ ಕಾಶ್ಮೀರ:ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಆರು ಭಯೋತ್ಪಾದಕರ ಹತ್ಯೆ

Update: 2025-05-16 20:56 IST

ಸಾಂದರ್ಭಿಕ ಚಿತ್ರ | PC : PTI

ಶ್ರೀನಗರ: ಎ.22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ನಿರ್ದಿಷ್ಟ ಪ್ರದೇಶಗಳಲ್ಲಿ ತಮ್ಮ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಗಳನ್ನು ತೀವ್ರಗೊಳಿಸಿದ್ದು, ಕಳೆದ ಮೂರು ದಿನಗಳಲ್ಲಿ ಆರು ಭಯೋತ್ಪಾದಕರನ್ನು ಕೊಲ್ಲಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದರು.

ಅವಂತಿಪೋರಾದಲ್ಲಿ ಭದ್ರತಾ ಪಡೆಗಳ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಶ್ಮೀರ ಐಜಿಪಿ ವಿ.ಕೆ.ಬಿರದಿ ಅವರು, ಭದ್ರತಾ ಪಡೆಗಳು ಕಳೆದ 48 ಗಂಟೆಗಳಲ್ಲಿ ಎರಡು ಅತ್ಯಂತ ಯಶಸ್ವಿ ಕಾರ್ಯಾಚರಣೆಗಳನ್ನು ನಡೆಸಿವೆ ಎಂದು ತಿಳಿಸಿದರು.

‘ಕಾಶ್ಮೀರದಲ್ಲಿ ಹೆಚ್ಚಿನ ಭಯೋತ್ಪಾದಕ ಚಟುವಟಿಕೆಗಳ ಹಿನ್ನೆಲೆಯಲ್ಲಿ ಇಲ್ಲಿ ನಿಯೋಜಿಸಲಾಗಿರುವ ಎಲ್ಲ ಭದ್ರತಾ ಪಡೆಗಳು ತಮ್ಮ ಕಾರ್ಯತಂತ್ರಗಳನ್ನು ಪುನರ್‌ಪರಿಶೀಲಿಸಿವೆ. ಪುನರ್‌ಪರಿಶೀಲನೆಯ ಬಳಿಕ ಕಾರ್ಯಾಚರಣೆಗಳ ಮೇಲೆ ಹೆಚ್ಚಿನ ಗಮನವನ್ನು ಹರಿಸಲಾಗಿದೆ. ಕಳೆದ 48 ಗಂಟೆಗಳಲ್ಲಿ ನಾವು ಎರಡು ಯಶಸ್ವಿ ಕಾರ್ಯಾಚರಣೆಗಳನ್ನು ನಡೆಸಿದ್ದು ಗಮನಾರ್ಹ ಸಾಧನೆಯನ್ನು ಮಾಡಿದ್ದೇವೆ. ಶೋಪಿಯಾನ್ ಮತ್ತು ಟ್ರಾಲ್ ಪ್ರದೇಶಗಳಲ್ಲಿ ನಡೆಸಲಾದ ಕಾರ್ಯಾಚರಣೆಗಳಲ್ಲಿ ಆರು ಭಯೋತ್ಪಾದಕರು ಬಲಿಯಾಗಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದನೆಯನ್ನು ನಿರ್ಮೂಲಿಸಲು ನಾವು ಬದ್ಧರಾಗಿದ್ದೇವೆ’ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News