×
Ad

ಸಂಸತ್ತಿನ ವಿಶೇಷ ಅಧಿವೇಶನ: ಮಂಗಳವಾರ ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಮಿತಿ ಸಭೆ ಕರೆದ ಸೋನಿಯಾ ಗಾಂಧಿ

Update: 2023-09-04 13:55 IST

Photo: PTI

ಹೊಸದಿಲ್ಲಿ: ಮುಂಬರುವ ಸಂಸತ್ತಿನ ವಿಶೇಷ ಅಧಿವೇಶನದ ಅಂಗವಾಗಿ ಮಂಗಳವಾರ ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಮಿತಿ ಸಭೆಯನ್ನು ಸೋನಿಯಾ ಗಾಂಧಿ ಕರೆದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಜ್ವರದಿಂದಾಗಿ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾ ಗಾಂಧಿ ಅವರು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪ್ರಸ್ತಾಪಿಸಬಹುದಾದ ವಿಷಯಗಳು, ಪಕ್ಷದ ಯೋಜನೆ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ವಿಶೇಷ ಸಂಸತ್ ಅಧಿವೇಶನದ ಕಾರ್ಯತಂತ್ರದ ಕುರಿತು ಚರ್ಚಿಸಲು INDIA ಮೈತ್ರಿಕೂಟದ ಸಂಸದರ ಸಭೆಯನ್ನೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆದಿದ್ದಾರೆ.

ಸೆಪ್ಟಂಬರ್ 18ರಿಂದ 22ರ ತನಕ ಐದು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನ ನಡೆಯಲಿದೆ. ಆದರೆ ವಿಶೇಷ ಅಧಿವೇಶನದ ಕಾರ್ಯಸೂಚಿ ಇನ್ನೂ ಬಹಿರಂಗವಾಗಿಲ್ಲ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News