×
Ad

'ದೇಶಭಕ್ತಿಯಲ್ಲಿ ನಾವು ಯಾರಿಗೂ ಕಡಿಮೆ ಇಲ್ಲ': ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ವಿರುದ್ಧ ಸ್ಟಾಲಿನ್ ವಾಗ್ದಾಳಿ

Update: 2026-01-24 13:40 IST

ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ (Photo: PTI)

ಹೊಸದಿಲ್ಲಿ: ಅಧಿವೇಶನದ ಆರಂಭದಲ್ಲಿ ಸಾಂಪ್ರದಾಯಿಕ ಭಾಷಣವನ್ನು ಓದಲು ನಿರಾಕರಿಸುವ ಮೂಲಕ ಸಾಂವಿಧಾನಿಕ ಸಂಪ್ರದಾಯಗಳನ್ನು ದುರ್ಬಲಗೊಳಿಸಿದ್ದಾರೆ ಮತ್ತು ತಮ್ಮ ಹುದ್ದೆಗೆ ಕಳಂಕ ತಂದಿದ್ದಾರೆ ಎಂದು ರಾಜ್ಯಪಾಲ ಆರ್. ಎನ್. ರವಿ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಶನಿವಾರ ತೀವ್ರ ವಾಗ್ದಾಳಿ ನಡೆಸಿದರು.

"ಕೋಟ್ಯಂತರ ಜನರಿಂದ ಆಯ್ಕೆಯಾದ ಈ ಸರಕಾರ ಸಿದ್ಧಪಡಿಸಿದ ಭಾಷಣವನ್ನು ಓದದೆ ರಾಜ್ಯಪಾಲರು ತಮ್ಮ ಹುದ್ದೆಯ ಘನತೆಗೆ ಧಕ್ಕೆ ಮಾಡಿದ್ದಾರೆ” ಎಂದು ಸ್ಟಾಲಿನ್ ವಿಧಾನಸಭೆಯಲ್ಲಿ ಹೇಳಿದರು.

ದೇಶಭಕ್ತಿಯಲ್ಲಿ ನಾವು ಯಾರಿಗೂ ಕಡಿಮೆ ಇಲ್ಲ ಮತ್ತು ಯಾರೂ ನಮಗೆ ದೇಶ ಭಕ್ತಿಯನ್ನು ಕಲಿಸುವ ಅಗತ್ಯವಿಲ್ಲ. ರಾಷ್ಟ್ರಗೀತೆಯ ಮೇಲಿನ ಗೌರವವು ರಾಜ್ಯದ ರಾಜಕೀಯ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿದೆ ಎಂದು ಹೇಳಿದರು.

ರಾಜ್ಯಪಾಲರ ವರ್ತನೆ ತಮಗೆ ನೋವನ್ನುಂಟು ಮಾಡಿದೆ. ರಾಜ್ಯಪಾಲರು ಸರಕಾರದ ವಿರುದ್ಧ ವರ್ತಿಸುತ್ತಿದ್ದಾರೆ. ನಾನು ರಾಷ್ಟ್ರ ಮತ್ತು ರಾಷ್ಟ್ರಗೀತೆಯ ಬಗ್ಗೆ ಆಳವಾದ ಗೌರವವನ್ನು ಹೊಂದಿರುವ ವ್ಯಕ್ತಿ ಎಂದು ಸ್ಟಾಲಿನ್ ಹೇಳಿದರು.

ತಮಿಳುನಾಡು ವಿಧಾನಸಭೆಯಲ್ಲಿ ಕಲಾಪದ ಆರಂಭದಲ್ಲಿ ತಮಿಳು ಥಾಯ್ ವಳ್ತು(Tamil Thai Vazhthu) ಮತ್ತು ಕೊನೆಯಲ್ಲಿ ರಾಷ್ಟ್ರಗೀತೆಯನ್ನು ಹಾಡುವುದು ಸಂಪ್ರದಾಯವಾಗಿತ್ತು ಎಂದು ಸ್ಟಾಲಿನ್ ಹೇಳಿದರು.

ತಮಿಳುನಾಡು ಇತರ ರಾಜ್ಯಗಳಿಗಿಂತ ಹೆಚ್ಚು ಅಭಿವೃದ್ಧಿ ಹೊಂದಿದೆ. ಇದಕ್ಕೆ ಕಾರಣ ನಮ್ಮ ಯೋಜನೆಗಳು. ಈ ಸರಕಾರದ ಮಟ್ಟಿಗೆ ಹೇಳುವುದಾದರೆ, ಸಾಧನೆಯ ಮೇಲೆ ಸಾಧನೆಯನ್ನು ಸೃಷ್ಟಿಸುವುದು ದ್ರಾವಿಡ ಮಾದರಿ ಸರಕಾರದ ವಿಶಿಷ್ಟ ಲಕ್ಷಣವಾಗಿದೆ ಎಂದು ಸ್ಟಾಲಿನ್ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News