ಸನಾತನ ಧರ್ಮದ ಕುರಿತು ಹೇಳಿಕೆ: ತಮಿಳುನಾಡು ಸರಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್
Update: 2023-09-22 15:13 IST
ಹೊಸದಿಲ್ಲಿ : ‘ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು’ ಎಂಬ ಹೇಳಿಕೆಗಾಗಿ ತಮಿಳುನಾಡು ಸರಕಾರ ಹಾಗೂ ಅದರ ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಿರುವ ಮನವಿಗೆ ಪ್ರತಿಕ್ರಿಯಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ತಮಿಳುನಾಡು ಸರಕಾರಕ್ಕೆ ನೋಟಿಸ್ ನೀಡಿದೆ.
ತಮಿಳುನಾಡು ಸಚಿವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಬಿ. ಜಗನ್ನಾಥ್ ಸಲ್ಲಿಸಿದ್ದ ಮನವಿಯ ಮೇರೆಗೆ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಹಾಗೂ ಬೇಲಾ ಎಂ. ತ್ರಿವೇದಿ ಅವರನ್ನೊಳಗೊಂಡ ನ್ಯಾಯ ಪೀಠವು ನೋಟಿಸ್ ಜಾರಿ ಮಾಡಿದೆ.
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ದಾಮ ಶೇಷಾದ್ರಿ ನಾಯ್ಡು ಅವರು, ‘ಈ ಧರ್ಮ ಒಳ್ಳೆಯದಲ್ಲ, ಅನ್ಯ ಧರ್ಮ ಒಳ್ಳೆಯದು ಎಂದು ಹೇಳುವಂತೆ ಸಚಿವರು ಶಾಲಾ ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.