×
Ad

ಉತ್ತರಪ್ರದೇಶ| ಸರ್ಕಾರಿ ಆಸ್ಪತ್ರೆಗೆ ನುಗ್ಗಿ ರೋಗಿಯ ಆಹಾರ ತಿಂದ ಬೀದಿನಾಯಿ: ವಿಡಿಯೋ ವೈರಲ್‌

Update: 2023-10-12 14:55 IST

Screengrab: X/@Mithileshdhar

ಮೊರಾದಬಾದ್: ಉತ್ತರ ಪ್ರದೇಶದ ಮೊರಾದಾಬಾದ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಬೀದಿ ನಾಯಿಯೊಂದು ರೋಗಿಗೆ ಇರಿಸಲಾಗಿದ್ದ ಆಹಾರವನ್ನು ತಿನ್ನುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್‌ ಆಗಿದೆ.

ವೀಡಿಯೊ ವೈರಲ್ ಆಗುತ್ತಿದ್ದಂತೆ, ಮೊರಾದಾಬಾದ್‌ನ ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧಿಕಾರಿ (CMO) ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

ಸುಮಾರು 30 ಸೆಕೆಂಡ್ ಅವಧಿಯ ವೀಡಿಯೊದಲ್ಲಿ ನಾಯಿಯು ರೋಗಿಯ ಹಾಸಿಗೆಯ ಪಕ್ಕದಲ್ಲಿ ಇಟ್ಟಿದ್ದ ಹಾಲು ಮತ್ತು ಆಹಾರವನ್ನು ತಿನ್ನುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಘಟನೆಯನ್ನು ಮುಖ್ಯ ವೈದ್ಯಕೀಯ ಅಧಿಕಾರಿ ಡಾ. ಕುಲದೀಪ್ ಸಿಂಗ್ ದೃಢೀಕರಿಸಿದ್ದು, "ವೀಡಿಯೊವನ್ನು ನನ್ನ ಗಮನಕ್ಕೆ ಬಂದ ಕೂಡಲೇ, ನಾನು ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕರ ನೇತೃತ್ವದಲ್ಲಿ ಈ ವಿಷಯದ ಬಗ್ಗೆ ತನಿಖೆಗೆ ಆದೇಶಿಸಿದೆ. ಅಲ್ಲದೆ, ಆಸ್ಪತ್ರೆಯ ವಾರ್ಡ್‌ಗಳಿಗೆ ಯಾವುದೇ ಪ್ರಾಣಿಗಳು ಪ್ರವೇಶಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಆದೇಶಿಸಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News