×
Ad

ನಮಗೆ ನೋವಾಗಿದೆ: ತಂದೆಯ ಅಂತ್ಯಸಂಸ್ಕಾರ ಮಾಡಲು ಸಾಧ್ಯವಾಗದ ಕ್ರಿಶ್ಚಿಯನ್ ವ್ಯಕ್ತಿಯ ಮನವಿಗೆ ಸುಪ್ರೀಂಕೋರ್ಟ್ ಪ್ರತಿಕ್ರಿಯೆ

Update: 2025-01-20 22:17 IST

ಹೊಸದಿಲ್ಲಿ: ಛತ್ತೀಸ್‌ ಗಢದ ಸ್ಥಳೀಯ ಗ್ರಾಮದಲ್ಲಿ ತಂದೆಯ ಅಂತ್ಯಕ್ರಿಯೆ ಮಾಡಲು ಸಾಧ್ಯವಾಗದ ಕ್ರಿಶ್ಚಿಯನ್ ವ್ಯಕ್ತಿಯ ಮನವಿಗೆ ಸಂಬಂಧಿಸಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಬೆಳವಣಿಗೆಯಿಂದ ನಮಗೆ ನೋವಾಗಿದೆ ಎಂದು ಹೇಳಿದೆ.

ಜನವರಿ 9ರಂದು ಛತ್ತೀಸ್ ಗಢ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಿದೆ. ಕ್ರಿಶ್ಚಿಯನ್ ಪಾದ್ರಿಯಾಗಿದ್ದ ತನ್ನ ತಂದೆಯನ್ನು ಚಿಂದ್ವಾರಾ ಗ್ರಾಮದ ಸ್ಮಶಾನದಲ್ಲಿ ಹೂಳಲು ಅನುಮತಿ ಕೋರಿದ್ದ ಅರ್ಜಿದಾರರ ಮನವಿಯನ್ನು ಸ್ವೀಕರಿಸಿ ರಾಜ್ಯ ಸರಕಾರ ಮತ್ತು ಹೈಕೋರ್ಟ್ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಾಗದಿರುವುದು ನೋವು ತಂದಿದೆ, ಅರ್ಜಿದಾರರು ತಮ್ಮ ತಂದೆಯ ಸಮಾಧಿ ಮಾಡಲು ಸುಪ್ರೀಂ ಕೋರ್ಟ್ ಬರಬೇಕಾಯಿತು ಎಂದು ಹೇಳಿದೆ.

ಅರ್ಜಿಯ ಪ್ರಕಾರ, ಅರ್ಜಿದಾರರು ಬುಡಕಟ್ಟು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಅವರ ತಂದೆ ವೃದ್ಧಾಪ್ಯ ಮತ್ತು ದೀರ್ಘಕಾಲದ ಅನಾರೋಗ್ಯದ ಕಾಯಿಲೆಯಿಂದ ಜನವರಿ 7ರಂದು ನಿಧನರಾಗಿದ್ದರು. ಅವರ ಕುಟುಂಬವು ಗ್ರಾಮದ ಸ್ಮಶಾನದಲ್ಲಿ ಕ್ರಿಶ್ಚಿಯನ್ನರಿಗೆ ನಿರ್ದಿಷ್ಟಪಡಿಸಿದ ಪ್ರದೇಶದಲ್ಲಿ ಅವರ ಪಾರ್ಥಿವ ಶರೀರವನ್ನು ಹೂಳಲು ಬಯಸಿದ್ದರು. ಆದರೆ ಕೆಲವು ಗ್ರಾಮಸ್ಥರು ಇದಕ್ಕೆ ವಿರೋಧಿಸಿದ್ದು, ಗ್ರಾಮದ ಸ್ಮಶಾನದಲ್ಲಿ ಅಂತ್ಯಕ್ರಿಯೆಯನ್ನು ನಡೆಸಿದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದರು.

ಗ್ರಾಮಸ್ಥರು ಹಿಂಸಾಚಾರಕ್ಕೆ ಮುಂದಾದಾಗ ಅರ್ಜಿದಾರರ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಪೊಲೀಸರು ಮೃತದೇಹವನ್ನು ಗ್ರಾಮದಿಂದ ಹೊರಕ್ಕೆ ಕೊಂಡೊಯ್ಯುವಂತೆ ಅವರ ಮೇಲೆ ಒತ್ತಡ ಹೇರಿದರು. ಇದರ ಪರಿಣಾಮವಾಗಿ ಜನವರಿ 7ರಿಂದ ಮೃತದೇಹವನ್ನು ಶವಾಗಾರದಲ್ಲಿ ಇರಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News